ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು : ವಿಶ್ವ ಪರಿಸರ ದಿನ
Thumbnail
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ವತಿಯಿಂದ ದಶಮಾನೋತ್ಸವದ ಪ್ರಯುಕ್ತ ವಿಶ್ವ ಪರಿಸರ ದಿನದ ಅಂಗವಾಗಿ ವನ‌ ಮಹೋತ್ಸವ ಕಾರ್ಯಕ್ರಮ ಮಟ್ಟಾರ್ ನಲ್ಲಿ ನಡೆಯಿತು. ಕರಾವಳಿ ಅಭಿವೃಧ್ಧಿ‌ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಶಿರ್ವ ಪೋಲೀಸ್ ಠಾಣೆಯ ಉಪ ನಿರೀಕ್ಷಕರಾದ ರಾಘವೇಂದ್ರ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವ ಹಿಂದೂ ಪರಿಷದ್ ಮಟ್ಟಾರು ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಪು ಪ್ರಖಂಡ ಅಧ್ಯಕ್ಷರಾದ ಜಯಪ್ರಕಾಶ್ ಪ್ರಭು ಪ್ರಸ್ತಾವನೆಗೈದರು. ಬಜರಂಗದಳ‌ ಕಾಪು ಪ್ರಖಂಡ ಸುರಕ್ಷಾ ಪ್ರಮುಖ್ ಆನಂದ, ಮಟ್ಟಾರು ಘಟಕ ಬಜರಂಗದಳ‌ ಸಂಚಾಲಕ ವಿಶ್ವನಾಥ ಆಚಾರ್ಯ, ದುರ್ಗಾವಾಹಿನಿ ಸಂಚಾಲಕಿ ದೀಕ್ಷಾ ಪ್ರಭು, ಸುರಕ್ಷಾ ಪ್ರಮುಖ್ ಅಭಿಜಿತ್ ಪೂಜಾರಿ, ಕೋಶಾಧಿಕಾರಿ ಅಜಿತ್ ಪೂಜಾರಿ, ಸೇವಾ ಪ್ರಮುಖ್ ಸತೀಶ್, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಾರಿಜಾ ಪೂಜಾರಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಮಟ್ಟಾರು ಇದರ ಕಾರ್ಯಕರ್ತರು, ಮತ್ತಿತರರು ಪಾಲ್ಗೊಂಡಿದ್ದರು. ರಂಜಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Additional image
05 Jun 2022, 09:23 PM
Category: Kaup
Tags: