ಕೊಲೆ ಪ್ರಕರಣ ಭೇದಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು
ಮಂಗಳೂರು : ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪ್ಪಾಡಿ ಎಂಬಲ್ಲಿ ಚರಣ್ ರಾಜ್ ಎಂಬವರನ್ನು ಕಿಶೋರ್ ಪುಜಾರಿ ಮತ್ತು ಇತರರ ತಂಡ ಜೂನ್ 4ರಂದು ತಲವಾರು ಮತ್ತು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದು ಈ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.
ಇದೊಂದು ಪೂರ್ವದ್ವೇಷದಿಂದ ಮಾಡಿರುವ ಕೊಲೆಯಾಗಿದ್ದು. ಈ ಹಿಂದೆ ಮೃತ ಚರಣ್ ರಾಜ್ ತನ್ನ ಸಹಚರರೊಂದಿಗೆ ಸೇರಿಕೊಂಡು ಸಂಪ್ಯ ಬಳಿ ಕಾರ್ತಿಕ್ ಮಾರ್ಲ ಎಂಬವರನ್ನು ಕೊಲೆ ಮಾಡಿದ್ದು ಪ್ರಸ್ತುತ ಜಾಮೀನಿನಲ್ಲಿ ಬಿಡುಗಡೆಗೊಂಡು ಪೆರ್ಲಂಪ್ಪಾಡಿಯಲ್ಲಿ ಹೊಸದಾಗಿ ತೆರೆಯಲಿರುವ ಮೆಡಿಕಲ್ ಶಾಪ್ ಕೆಲಸಕ್ಕೆ ಓಡಾಡಿಕೊಂಡಿದ್ದ ವೇಳೆ ಆರೋಪಿತರುಗಳು ಹೊಂಚುಹಾಕಿ ಕೊಲೆ ಮಾಡಿರುವುದು ತಿಳಿದು ಬಂದಿದೆ.
ಪ್ರಕರಣದಲ್ಲಿ ಆರೋಪಿಗಾದ ಕಿಶೋರ್ ಪುಜಾರಿ ( 34),ರಾಕೇಶ್ ಮಡಿವಾಳ (27), ರೇಮಂತ್ ಗೌಡ (26), ನರ್ಮೆಶ್ ರೈ(29), ನಿತಿಲ್ ಶೆಟ್ಟಿ (23), ವಿಜೇಶ್(22) ಎಂಬ ಆರೋಪಿಗಳನ್ನು ದಸ್ತಗಿರಿ ಮಾಡಿ ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸಿದ ಬಾಳುಕತ್ತಿ-1 , ರಾಡ್ -2 ಮತ್ತು ಮೋಟಾರ್ ಸೈಕಲ್ -2 ನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಸದ್ರಿ ಪ್ರಕರಣದ ಪತ್ತೆ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಋಷಿಕೇಶ್ ಭಗವಾನ್ ಸೊನವಣೆ ಐಪಿಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ ಹಾಗು ಮಾನ್ಯ ಪೊಲೀಸ್ ಉಪಾಧೀಕ್ಷಕರಾದ ಗಾನಾ.ಪಿ.ಕುಮಾರ್ ರವರ ಮಾರ್ಗದರ್ಶನದಂತೆ ನವೀನ್ ಚಂದ್ರ ಜೋಗಿ, ಪೊಲೀಸ್ ವೃತ್ತ ನಿರೀಕ್ಷಕರು, ಮತ್ತು ಸಿಬ್ಬಂದಿಗಳು, ರುಕ್ಮ ನಾಯ್ಕ್ ಪಿ ಎಸ್ ಐ ಬೆಳ್ಳಾರೆ ಮತ್ತು ಸಿಬ್ಬಂದಿಗಳು, ದಿಲೀಪ್ ಪೊಲೀಸ್ ಉಪನಿರೀಕ್ಷಕರು ಸುಳ್ಯ ಠಾಣೆ, ಮತ್ತು ಸಿಬ್ಬಂದಿಗಳು, ಉದಯರವಿ ಪಿ ಎಸ್ ಐ ಪುತ್ತೂರು ಗ್ರಾಮಾಂತರ ಠಾಣೆ ಮತ್ತು ಸಿಬ್ಬಂದಿಗಳು, ರಾಜೇಶ್ ಪುತ್ತೂರು ನಗರ ಠಾಣೆ ಮತ್ತು ಸಿಬ್ಬಂದಿಗಳು ಪತ್ತೆ ಕಾರ್ಯದಲ್ಲಿ ಸಹಕರಿಸಿದ್ದರು.
