ಮೋದಿ ಆಡಳಿತದ ಎಂಟನೆ ವರ್ಷದ ಆಚರಣೆ ; ಸಾಧಕರಿಗೆ ಸನ್ಮಾನ
Thumbnail
ಕಾಪು : ಮೋದಿ ಆಡಳಿತದ ಎಂಟನೆ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರಿ ಬಿಜೆಪಿ ಮಹಾಶಕ್ತಿ ಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ಜರಗಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದಿ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ‌ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ವಹಿಸಿದ್ದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾ ಬಿಜೆಪಿ ಸಂಚಾಲಕರಾದ ಶಿಲ್ಪಾ ಜಿ‌ ಸುವರ್ಣ, ಮಂಡಲ ಸಂಚಾಲಕರಾದ ಮುರಳೀಧರ ಪೈ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ನಿಕಟಪೂರ್ವ ಮಂಡಲ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ನಿಕಟಪೂರ್ವ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಸಾಧಕರ ಗೌರವಾರ್ಪಣೆ ಮಂಡಲ ಸಂಚಾಲಕರಾದ ಗುರುಕೃಪಾ ರಾವ್, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ ಪಡುಬಿದ್ರಿ, ಪಡುಬಿದ್ರಿ ಪಂಚಾಯತ್ ಅಧ್ಯಕ್ಷರಾದ ರವಿ‌ಶೆಟ್ಟಿ, ಹೆಜಮಾಡಿ ಪಂಚಾಯತ್ ಪ್ರಭಾರ ಅಧ್ಯಕ್ಷರಾದ ಪವಿತ್ರ ಗಿರೀಶ್, ಪಲಿಮಾರು ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಸಾದ್ ಪಲಿಮಾರು ಕಾರ್ಯಕ್ರಮ ನಿರೂಪಿಸಿದರು.
13 Jun 2022, 07:51 AM
Category: Kaup
Tags: