ಕಾಪು ಬಂಟರ ಸಂಘ : ಭಜನಾ ಕಾರ್ಯಕ್ರಮ ಉದ್ಘಾಟನೆ
Thumbnail
ಕಾಪು‌ : ಬಂಟರ ಸಂಘ (ರಿ) ಕಾಪುವಿನ ಭಜನಾ ಕಾರ್ಯಕ್ರಮ ಹಾಗೂ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ಸೋಮವಾರ, ಸಂಘದ ಕಛೇರಿಯಲ್ಲಿ ಜರಗಿತು. ಮುಂಬೈ ಉದ್ಯಮಿ ಉದಯ ಸುಂದರ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಭಜನೆಯ ಮಹತ್ವ, ತಂಡಗಳ ಹೊಣೆ, ತರಬೇತಿ, ವ್ಯಕ್ತಿತ್ವ ವಿಕಸನ, ಶೃತಿ, ಲಯ, ತಾಳ ಮತ್ತು ಭಾಷಾ ಶುದ್ಧತೆ ಹಾಗೂ ಸಂವಹನ ಸಾಮರ್ಥ್ಯ ವೃದ್ಧಿಯ ಬಗ್ಗೆ ಮಾತನಾಡಿದರು. ಶೀಲಾ ಕೆ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ ಮೊದಲಾದವರು ಉಪಸ್ಥಿತರಿದ್ದರು. ಉದ್ಘಾಟನಾ ಸಭೆಯ ಅಧ್ಯಕ್ಷತೆಯನ್ನು ಬಂಟರ ಸಂಘ(ರಿ) ಕಾಪು ಇದರ ಅಧ್ಯಕ್ಷ ವಾಸುದೇವ ಶೆಟ್ಟಿಯವರು ವಹಿಸಿದ್ದರು. ಕಾಪು ಬಂಟರ ಸಂಘದ ಮಹಿಳಾ ವೇದಿಕೆಯ ಸಂಚಾಲಕಿ ಜಯಲಕ್ಷ್ಮೀ ಎಸ್ ಶೆಟ್ಟಿಯವರು ಸ್ವಾಗತಿಸಿ, ಕಾರ್ಯದರ್ಶಿ ಲೀಲಾಧರ ಶೆಟ್ಟಿಯವರು ಪ್ರಾಸ್ತಾವಿಕ ಮಾಡಿದರು. ನಿರ್ಮಲ್ ಕುಮಾರ್ ಹೆಗ್ಡೆಯವರು ಕಾರ್ಯಕ್ರಮ ನಿರೂಪಣೆ ಮಾಡಿ, ಪ್ರಭಾತ್ ಶೆಟ್ಟಿ ಮೂಳೂರು ವಂದಿಸಿದರು.
14 Jun 2022, 11:59 PM
Category: Kaup
Tags: