ತಾಯಿಯ ತೀವ್ರ ಅನಾರೋಗ್ಯದ ನಡುವೆಯೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಕಾರ್ತಿಕ್
Thumbnail
ಉಡುಪಿ : ಇಲ್ಲಿನ ಎಂಜಿಎಂ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ಶೆಣೈ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 584 (97.33)ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಕಾರ್ತಿಕ್ ಅವರ ತಾಯಿ ಕಳೆದ ಒಂದೂವರೆ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗಿದೆ. ಕ್ಯಾನ್ಸರ್ ಪೀಡಿತ ತಾಯಿಯ ನೋವು ಒಂದೆಡೆಯಾದರೆ, ಹಣಕಾಸಿನ ತೀವ್ರ ತೊಂದರೆಯ ನಡುವೆಯೂ ಶ್ರೇಷ್ಠ ಸಾಧನೆ ಮಾಡಿರುವುದು ಗಮನಾರ್ಹ.
Additional image
18 Jun 2022, 05:16 PM
Category: Kaup
Tags: