ಹರಿಯಾಣದಲ್ಲಿ ಜರಗಲಿರುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಸಮಿತಿಯ ಸಭೆಗೆ ಸಂತ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ
Thumbnail
ಕಾಪು : ಉಡುಪಿ ಜಿಲ್ಲೆಯ ಶಂಕರಪುರ ದ್ವಾರಕಾಮಾಯಿ ಮಠದ ಸಂತ ಶ್ರೀ ಸಾಯಿ ಈಶ್ವರ್ ಗುರೂಜಿ ಹರಿಯಾಣ ಪಟೋಡಿ ಎಂಬಲ್ಲಿ ಜೂನ್ 25 ಮತ್ತು 26ರಂದು ನಡೆಯಲಿರುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಸಮಿತಿಯ ಸಭೆಯಲ್ಲಿ ರಾಜ್ಯ ಪ್ರಮುಖ್ ಓಂ ಶ್ರೀ ವಿದ್ಯಾನಂದ ಸರಸ್ವತಿ ಜೊತೆಗೆ ಭಾಗವಹಿಸಬೇಕೆಂದು ಸೂಚಿಸಲಾಗಿದೆ. ಈ ರಾಷ್ಟ್ರೀಯ ಸಭೆಯಲ್ಲಿ ಕರ್ನಾಟಕ ರಾಜ್ಯಸಮಿತಿಯಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿ ಮಹತ್ವದ ಹುದ್ದೆಯನ್ನು ವಹಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
20 Jun 2022, 05:46 PM
Category: Kaup
Tags: