ಜುಲೈ 3 : ಎನ್ ಎಸ್ ಸಿ ಡಿ ಎಫ್ ಆಶ್ರಯದಲ್ಲಿ ಸಂಸ್ಕೃತಿ ಜಾತ್ರೆ - ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ
ಮಂಗಳೂರು : ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಒಂದು ದಿನದ ಸಂಸ್ಕೃತಿ ಜಾತ್ರೆ ಕಾರ್ಯಕ್ರಮ ಜುಲೈ 3, ಭಾನುವಾರ ಬೆಳಿಗ್ಗೆ (9ರಿಂದ ರಾತ್ರಿ 9ರ ವರೆಗೆ) ಮಂಗಳೂರು ಪುರ ಭವನದಲ್ಲಿ ನಡೆಯಲಿದೆ.
ಈ ಮಹತ್ವಪೂರ್ಣ ಕಾರ್ಯಕ್ರಮವನ್ನು ವಿಶ್ರಾಂತ ಹೈಕೋರ್ಟ್ ನ್ಯಾಯಾಧೀಶ ಅರಳಿ ನಾಗರಾಜ್ ಉದ್ಘಾಟಿಸಲಿದ್ದು, ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಗಂಗಾಧರ್ ಗಾಂಧಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಲೋಕಾಯುಕ್ತ ನ್ಯಾಯವಾದಿ ರವೀಂದ್ರ ಮುನ್ನಿಪಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜೆ, ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ, ಕವಿಗೋಷ್ಠಿ ಅಧ್ಯಕ್ಷೆ ಉಪನ್ಯಾಸಕಿ, ಕವಯತ್ರಿ ಮಾನ್ವಿ, ಸಂಚಾಲಕಿ ಮಾನಸ ಪ್ರವೀಣ್ ಭಟ್, ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ NSCDF ಸಮಾಜ ಸೇವಾ ಪುರಸ್ಕಾರವನ್ನು ಮೈಸೂರಿನ ಸಮಾಜ ಸೇವಕ ಡಾ.ಎಂ.ಪಿ.ವರ್ಷ, NSCDF ಸಾಹಿತ್ಯ ಸೇವಾ ಪುರಸ್ಕಾರವನ್ನು ಪಿ.ವಿ.ಪ್ರದೀಪ್ ಕುಮಾರ್, NSCDF ಬಾಲ ಪ್ರತಿಭಾ ಪುರಸ್ಕಾರವನ್ನು ಲಾಲಿತ್ಯ ಕುಮಾರ್ ಬೇಲೂರು ಇವರಿಗೆ ನೀಡಿ ಗೌರವಿಸಲಾಗುವುದು.
ಬಳಿಕ ಕವಿಗೋಷ್ಠಿ, ಯಕ್ಷಗಾನ ಗೀತಗಾಯನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು NSCDF ಪ್ರಧಾನ ಕಾರ್ಯದರ್ಶಿ ದಿನಕರ ಡಿ ಬಂಗೇರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
