ಕಕ್ಕುಂಜೆ : ಕಳವುಗೈದವರ ಬಂಧನ
Thumbnail
ಉಡುಪಿ : ತಾಲೂಕಿನ ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ಎಂಬಲ್ಲಿ 9 ಪವನ್ ತೂಕದ ರೂಪಾಯಿ 3,15,000 ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಈ ಪ್ರಕರಣವಾಗಿತ್ತು. ಮನೆಯೊಡತಿ ಪ್ರಮೀಳ ಬಂಗೇರರವರು ಮನೆಗೆ ಬರುತ್ತಿದ್ದ ಸಂತೋಷ ಎಂಬಾತನ ಮೇಲೆ ಸಂಶಯ ಇರುವುದಾಗಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳಾದ ಕಕ್ಕುಂಜೆ ಗ್ರಾಮದ ಸಂತೋಷ್ ಪೂಜಾರಿ (36) ಮತ್ತು ಕಟಪಾಡಿ ಮಟ್ಟುವಿನ ರಾಕೇಶ್ ಪಾಲನ್ (37)ನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಪ್ರಕರಣದಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಮಾನ್ಯ ಪೊಲೀಸ್‌ ಅಧೀಕ್ಷಕರಾದ ಎನ್‌. ವಿಷ್ಣುವರ್ಧನ್‌ ಆದೇಶದಂತೆ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಸಿದ್ದಲಿಂಗಪ್ಪ, ಡಿವೈಎಸ್‌ಪಿ ಸುಧಾಕರ ಸದಾನಂದ ನಾಯ್ಕ್ ನಿರ್ದೇರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ ಕುಮಾರ್ ಪಿರವರ ಮಾರ್ಗದರ್ಶನದಂತೆ ಪಿ.ಎಸ್‌.ಐ ಮಹೇಶ್ ಟಿ.ಎಮ್, ಪ್ರಸಾದ್‌ಕುಮಾರ್‌ ಕೆ. ಪಿ.ಎಸ್‌.ಐ ತನಿಖೆ, ಪಿ.ಎಸ್.ಐ ವಾಸಪ್ಪ ನಾಯ್ಕ್, ಹಾಗೂ ಸಿಬ್ಬಂದಿಯವರಾದ ಎ.ಎಸ್.ಐ ಅರುಣ್ , ಸತೀಶ್ ಬೆಳ್ಳೆ , ಕಿರಣ್ ರವರು ಸಹಕರಿಸಿದ್ದರು.
03 Jul 2022, 05:33 PM
Category: Kaup
Tags: