ಉದ್ಯಾವರ : ಮಳೆಗಾಲದ ಸಮಸ್ಯೆ - ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದಿಂದ ಪಂಚಾಯತ್ಗೆ ಮನವಿ
ಉದ್ಯಾವರ : ಇಲ್ಲಿನ ಕುಟುಂಬವೊಂದರ ಹಿರಿಯ ನಾಗರಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಮಳೆಗಾಲದಲ್ಲಿ ತುಂಬಿ ಹರಿಯುವ ನೀರಿನಿಂದ ನಡೆದಾಡಲು ಆಗುವ ಅಡೆತಡೆಗಳ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉದ್ಯಾವರ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಗೆ ಮನವಿ ನೀಡಲಾಯಿತು.
ಮಳೆಗಾಲದ ಸಮಯದಲ್ಲಿ ತುಂಬಿ ಹರಿಯುವ
ನೀರಿನಿಂದ ನಡೆದಾಡಲು ಕಷ್ಟಕರ ಜೀವನವಾಗಿದೆ. ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ
ಪರಿಸ್ಥಿತಿ ಬಂದಿದೆ. ಮಕ್ಕಳು ಹಾಗೂ ಹಿರಿಯ ನಾಗರಿಕರ ಪ್ರಾಣಕ್ಕೆ ಕುತ್ತು ತರುವ ಹಾಗೂ ರಾತ್ರಿ
ಹೊತ್ತಿನಲ್ಲಿ ವಿಷ ಜಂತುಗಳ ಆಟ ಹೆಚ್ಚಾಗಿರುವುದರಿಂದ ಪ್ರಾಣಕ್ಕೆ ಅಪಾಯ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ನೀರಲ್ಲಿ ಓಡಾಡುವುದರಿಂದ ಹಿರಿಯ ನಾಗರಿಕರಿಗೆ ಹಾಗೂ ಮಕ್ಕಳಿಗೆ ರೋಗ ಬರುವಂತಹ ಸಾಧ್ಯತೆ ಇದೆ.
ಇದಕ್ಕೆ ಸಂಬಂಧಪಟ್ಟ ಹಾಗೆ ಸ್ಥಳೀಯ ಪಂಚಾಯತಿ ಸದಸ್ಯರಿಗೆ ಹಾಗೂ ಅಧ್ಯಕ್ಷರಿಗೆ ಎರಡು ವರ್ಷದ ಹಿಂದೆ ಗಮನಕ್ಕೆ ತಂದಿರುತ್ತೇವೆ. ಆದರೆ ಇದುವರೆಗೆ ಯಾವುದೇ ಪ್ರಯೋಜನ ಆಗಲಿಲ್ಲ. ಈ ಸ್ಥಳಕ್ಕೆ ಶಾಶ್ವತ ಪರಿಹಾರ ಸಿಗಬೇಕೆಂದು ಆಗ್ರಹಿಸಿದ್ದಾರೆ.
ಈ ಸಂದರ್ಭ ಸಮಸ್ಯೆಗೊಳಗಾದ ಕುಟುಂಬ ವರ್ಗ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.
