ಕಾಪು : ಅಕ್ರಮ ಗೋ ಮಾಂಸ ಮಾರಾಟ : ಇಬ್ಬರು ಪೋಲಿಸ್ ವಶಕ್ಕೆ
ಕಾಪು : ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿ ಬಂದ ಮೇರೆಗೆ
ಮಲ್ಲಾರು ಗ್ರಾಮದ ಕೋಟೆ ರಸ್ತೆಯ ರೈಲ್ವೆ ಸೇತುವೆ ಬಳಿ ಇಬ್ಬರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.
ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಶ್ರೀಶೈಲ ಡಿ. ಎಮ್ ಇವರು ಕರ್ತವ್ಯದಲ್ಲಿರುವ ಸಮಯ ಮಲ್ಲಾರು ಗ್ರಾಮದ ಪಕೀರ್ಣ ಕಟ್ಟೆಯಿಂದ ಮೂಳೂರು ಕಡೆಗೆ ಕಪ್ಪು ಬಣ್ಣದ ಹೊಂಡಾ ಆಕ್ಟಿವಾ ಸ್ಕೂಟರ್ ನಲ್ಲಿ 2 ಜನ ವ್ಯಕ್ತಿಗಳು ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿ ಬಂದ ಮೇರೆಗೆ ಮಲ್ಲಾರು ಗ್ರಾಮದ ಕೋಟೆ ರಸ್ತೆಯ ರೈಲ್ವೆ ಸೇತುವೆ ಬಳಿ ಹೋಗಿ ನಿಂತು ವಾಹನಗಳನ್ನು ಪರಿಶೀಲಿಸುತ್ತಿರುವಾಗ ಸ್ಕೂಟರ್ ನ್ನು ನಿಲ್ಲಿಸುವಂತೆ ಸೂಚನೆ ನೀಡಿ ತಡೆದು ನಿಲ್ಲಿಸಿ ಸ್ಕೂಟರ್ ನ್ನು ಪರಿಶೀಲಿಸಿದಾಗ ಸ್ಕೂಟರ್ ನ ಮುಂಭಾಗದಲ್ಲಿ ಹಳದಿ ಮತ್ತು ಹಸಿರು ಬಣ್ಣದ ಪಾಲಿಥಿನ್ ಚೀಲದಲ್ಲಿ ಸುಮಾರು 15 ಕೆ.ಜಿಯಷ್ಟು ಮಾಂಸವಿದ್ದು, ಸ್ಕೂಟರ್ ಸವಾರ ಹಾಗೂ ಸಹ ಸವಾರನಲ್ಲಿ ಯಾವ ಮಾಂಸ ಎಂಬ ಬಗ್ಗೆ ವಿಚಾರಿಸಿದಾಗ ದನದ ಮಾಂಸ ಎಂದು ತಿಳಿದು ಬಂದಿದೆ.
ಹುಸೇನಬ್ಬ ಮತ್ತು ಶಂಶುದ್ಧೀನ್ ಪೋಲಿಸರು ವಶಪಡಿಸಿಕೊಂಡ ಆರೋಪಿಗಳು.
ಇವರುಗಳು ಮಾಂಸ ಮಾರಾಟ ಮಾಡಲು ಯಾವುದೇ ಪರವಾನಗಿ ಹೊಂದಿಲ್ಲ ಹಾಗೂ ತಾವುಗಳು ಬೀದಿ ಬದಿಯಲ್ಲಿನ ದನವನ್ನು ಕಳವು ಮಾಡಿ, ಹಾಡಿಯಲ್ಲಿ ಮಾಂಸ ಮಾಡಿ ಮನೆ ಮನೆಗೆ ಮಾರಾಟ ಮಾಡುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
