ನಟ ಪೃಥ್ವಿ ಅಂಬಾರ್‌ ತಾಯಿ ವಿಧಿವಶ
Thumbnail
ಕಾಪು : ಉದಯೋನ್ಮುಖ ನಟ, ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ಮಂಗಳೂರಿನಲ್ಲಿ ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದಲ್ಲಿ ತೊಡಗಿಸಿಕೊಂಡಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್‌ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ. ಚಿತ್ರಗಳ ಸಕ್ಸಸ್​ನ್ನು ಖುಷಿ ಪಡೋ ಸಮಯದಲ್ಲಿ ನಟ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ.
16 Jul 2022, 01:59 PM
Category: Kaup
Tags: