ಕಾಪು ಹರೀಶ್ ನಾಯಕ್ ಅವರಿಗೆ ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯಿಂದ ಸನ್ಮಾನ
Thumbnail
ಉಚ್ಚಿಲ : ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಆಶ್ರಯದಲ್ಲಿ ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ, ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಉದ್ಘಾಟನಾ ಕಾರ್ಯಕ್ರಮ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದ ಮಾಧವಮಂಗಳ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಈ ಕಾರ್ಯಕ್ರಮದ ಜವಾವ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಕಾಪು ಹರೀಶ್ ನಾಯಕ್ ಅವರನ್ನು ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ವತಿಯಿಂದ ಭಾರತ ಸರಕಾರದ ನ್ಯಾಶನಲ್ ಬ್ಯಾಂಕ್‌ ಆಫ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ನ ಅಧ್ಯಕ್ಷರಾದ ಪದ್ಮಭೂಷಣ ಕೆ.ವಿ ಕಾಮತ್ ಬೆಳ್ಳಿಯ ಶಂಖದ ಗೌರವದೊಂದಿಗೆ ಸನ್ಮಾನಿಸಿದರು. ಈ ಸಂದರ್ಭ ಮುಂಬಯಿಯ ಖ್ಯಾತ ಸುಪ್ರೀಂ ಕೋರ್ಟ್‌ ವಕೀಲರಾದ ರವಿಚಂದ್ರ ಕಿಣಿ, ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈವೆಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕರಾದ ಪಿ ರವೀಂದ್ರ ದಯಾನಂದ ಪೈ, ಉಡುಪಿಯ ಅನಂತ ವೈದಿಕ ಕೇಂದ್ರದ ವೇದಮೂರ್ತಿ ಚೇಂಪಿ ರಾಮಚಂದ್ರ ಅನಂತ ಭಟ್, ಮಂಗಳೂರು ಗಣೇಶ್ ಬೀಡಿ ವರ್ಕ್ಸ್ ಪ್ರೈವೆಟ್ ಲಿಮಿಟೆಡ್ ಮೈಸೂರು ಇದರ ಪಾಲುದಾರರಾದ ಗೋವಿಂದ ಜಗನ್ನಾಥ ಶೆಣೈ, ಅಮೇರಿಕದ ವಾಷಿಂಗ್‌ಟನ್ ಡಿಸಿಯ ಇಂಡಿಯನ್ ಸಿಎ ಎಸೋಸಿಯೇಷನ್ ನ ಸ್ಥಾಪಕಾಧ್ಯಕ್ಷರು, ಹಾಗೂ ವಿಶ್ವ ಬ್ಯಾಂಕ್ ನ ಕಾರ್ಯನಿರ್ವಾಹಕರಾಗಿರುವ ಸಿಎ ಗೋಕುಲ್‌ದಾಸ್ ಪೈ, ಮುಂಬಯಿ ನ್ಯಾಚುರಲ್ ಐಸ್‌ ಕ್ರೀಂನ ಆಡಳಿತ ನಿರ್ದೇಶಕರಾದ ರಘುನಂದನ್ ಎಸ್. ಕಾಮತ್, ಮುಂಬಯಿಯ ಎಮ್.ವಿ. ಕಿಣಿ ಲಾ-ಫರ್ಮ್ ನ ಸಂಸ್ಥಾಪಕರಾದ ಖ್ಯಾತ ಸುಪ್ರೀಂ ಕೋರ್ಟ್ ನ ವಕೀಲರಾದ ಮಣಿಪುರ ವಸಂತ ಕಿಣಿ, ಭಾರತ ಸರಕಾರದ ನ್ಯಾಶನಲ್ ಬ್ಯಾಂಕ್‌ ಆಫ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ನ ಅಧ್ಯಕ್ಷರಾದ ಪದ್ಮಭೂಷಣ ಕೆ.ವಿ ಕಾಮತ್, ಎಂ ವಿ ಕಿಣಿ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಇದರ ವಿಶ್ವಸ್ಥರಾದ ರತ್ನಾಕರ ಕಾಮತ್, ಪಡುಬಿದ್ರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೋಕ್ತೇಸರರಾದ ಪಿ ರಾಮಚಂದ್ರ ಶೆಣೈ, ಕಾರ್ಗಿಲ್‌ ಹುತಾತ್ಮ ಲೆ|ಕ|ಶೌರ್ಯಚಕ್ರ ಪುರಸ್ಕೃತ ಅಜಿತ್ ವಿ ಭಂಡಾ‌ರ್ಕಾರ್‌ ರವರ ಧರ್ಮಪತ್ನಿ ಶಕುಂತಲಾ ಎ. ಭಂಡಾ‌ರ್ಕಾರ್‌, ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಹಳೆ ಮಾರಿಗುಡಿಯ ಆಡಳಿತ ಮೊಕ್ತೇಸರರಾದ ಶ್ರೀ ಪ್ರಸಾದ ಶೆಣೈ, ರಾಯಚೂರಿನ ಹೆಸರಾಂತ ಲೆಕ್ಕ ಪರಿಶೋಧಕರಾದ ಉಪ್ಪುಂದ ರಾಮಚಂದ್ರ ಪ್ರಭು, ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ಸಂಚಾಲಕರಾದ ಆರ್. ವಿವೇಕಾನಂದ ಶೆಣೈ, ಅಧ್ಯಕ್ಷರಾದ ಜಿ. ಸತೀಶ್ ಹೆಗ್ಡೆ ಕೊಟ, ಸಿಎ ಎಸ್ ಎಸ್ ನಾಯಕ್, ವಿಜಯಕುಮಾರ್ ಶೆಣೈ, ಸಿಎ ಗೋಪಾಲಕೃಷ್ಣ ಭಟ್, ಮುರಳೀದರ ಜಿ ಶೆಣೈ, ಸಾಣೂರು ನರಸಿಂಹ ಕಾಮತ್, ಸಿಎ ಎಸ್ ಎಸ್ ನಾಯಕ್ ಉಪಸ್ಥಿತರಿದ್ದರು.
25 Jul 2022, 09:31 PM
Category: Kaup
Tags: