ಸುರತ್ಕಲ್ ಹತ್ಯೆ : 4 ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
Thumbnail
ಸುರತ್ಕಲ್ : ಬೆಳ್ಳಾರೆಯ ಹತ್ಯೆಯ ಬಳಿಕ ಇದೀಗ ಮತ್ತೊಂದು ಹತ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ನಡೆದಿದೆ. ಹತ್ಯೆಯಾದ ಯುವಕ ಪಾಝಿಲ್. ಬಟ್ಟೆ ಅಂಗಡಿಯ ಮುಂದೆ ನಿಂತ ಸಂದರ್ಭ ಹಲ್ಲೆಯಾಗಿದೆ. ಸಿಸಿ ಟಿವಿ ದೃಶ್ಯಾವಳಿಯಲ್ಲಿ 5 ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಫಾಝಿಲ್ ಮೇಲೆ ಎರಗಿದ್ದಾರೆ. ಆಸ್ಪತ್ರೆಗೆ ಸೇರಿಸಿದರೂ ಯಾವುದೇ ಪ್ರಯೋಜನವಾಗದೆ ಫಾಝಿಲ್ ಮೃತರಾಗಿದ್ದಾರೆ. ಪ್ರೀತಿಯ ವಿಷಯ ಎಂದು ಹೇಳಲಾಗುತ್ತಿದೆಯಾದರೂ, ಪೋಲಿಸರು ತನಿಖೆ ಚುರುಕುಗೊಳಿಸಿದ್ದಾರೆ. ಅಹಿತಕಾರಿ ಘಟನೆ ನಡೆಯದಂತೆ ಬಜ್ಪೆ, ಪಣಂಬೂರು, ಮುಲ್ಕಿ, ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗಿನವರೆಗೆ ನಿಷೇಧಾಜ್ಞೆ ಜಾರಿಗೆ ಮಂಗಳೂರು ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.
28 Jul 2022, 10:19 PM
Category: Kaup
Tags: