ಬಲಾಯಿಪಾದೆ ಬಳಿ ಸ್ಕೂಟಿಗೆ ಲಾರಿ ಡಿಕ್ಕಿ ; ಯುವಕನಿಗೆ ಗಾಯ
Thumbnail
ಉದ್ಯಾವರ : ಕಾಪು ಠಾಣಾ ವ್ಯಾಪ್ತಿಯ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಯುವಕನೋರ್ವನಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ನಡೆದಿದೆ. ಗಾಯಗೊಂಡ ಯುವಕನನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಲಾಯಿಪಾದೆ ಜಂಕ್ಷನ್ ನಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ನಿರಂತರ ಅಪಘಾತ ಸಂಭವಿಸುತ್ತಿದ್ದು, ಆದಷ್ಟು ಶೀಘ್ರವಾಗಿ ಸಂಬಂಧಪಟ್ಟವರು ಇತ್ತ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
30 Jul 2022, 06:34 PM
Category: Kaup
Tags: