ಕಾರ್ಕಳ : ಇನ್ನಾ ಬಳಿ ಸುರತ್ಕಲ್ ಫಾಜಿಲ್ ಕೊಲೆಗೆ ಬಳಸಿದ ಕಾರು ಪತ್ತೆ
ಕಾರ್ಕಳ : ತಾಲೂಕಿನ ಇನ್ನಾ ಕಡಕುಂಜ ಹಾಡಿ ಬಳಿ ಸುರತ್ಕಲ್ ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಕಾರು ಎನ್ನಲಾದ ಇಯೊನ್ ಕಾರು ಪತ್ತೆಯಾಗಿದೆ.
ಇದು ಪಡುಬಿದ್ರಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಪೋತ್ತಮ ಪರಿಶೀಲನೆ ನಡೆಸಿದ್ದಾರೆ.
ಬೆರಳಚ್ಚು ತಜ್ಞರು ಆಗಮಿಸುವ ಹಿನ್ನಲೆಯಲ್ಲಿ
ಕಾರನ್ನು ಯಾರೂ ಸ್ಪರ್ಶಿಸಬಾರದೆಂದು ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಸ್ಥಳೀಯರ ಪ್ರಕಾರ
ನಾಲ್ಕು ದಿನಗಳಿಂದ ಈ ಕಾರು ಈ ಭಾಗದಲ್ಲಿ ಅನಾಥ ಸ್ಥಿತಿಯಲ್ಲಿದ್ದು, ಅಷ್ಟಾಗಿ ಗಮನಿಸಿರಲಿಲ್ಲ. ಇವತ್ತು ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
