ಯುವವಾಹಿನಿ ಕಾಪು ಘಟಕದ ವತಿಯಿಂದ ಪರಿಸರ ಜಾಗೃತಿ, ಸಸಿ ವಿತರಣಾ ಸಮಾರಂಭ
Thumbnail
ಕಾಪು : ಯುವವಾಹಿನಿ ಕಾಪು ಘಟಕದ ವತಿಯಿಂದ ಯುವವಾಹಿನಿ ಸದಸ್ಯರು ಮತ್ತು ಸಾರ್ವಜನಿಕರಿಗೆ ಕಾಪು ಬಿಲ್ಲವರ ಸಹಾಯಕ ಸಂಘದ ಆವರಣದಲ್ಲಿ ಪರಿಸರ ಮಾಹಿತಿ ಜಾಗೃತಿಯೊಂದಿಗೆ ಸಸಿ ವಿತರಿಸಲಾಯಿತು. ಅರಣ್ಯ ಇಲಾಖೆಯ ಅಧಿಕಾರಿ ಕೇಶವ ಅಮೀನ್ ಅವರು ಪರಿಸರ ಜಾಗೃತಿ ಮಾಹಿತಿಯೊಂದಿಗೆ ಸಸಿ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಎರ್ಮಾಳು ಶುಭಾಶಂಸನೆಗೈದರು. ಯುವವಾಹಿನಿ ಕಾಪು ಘಟಕದ ಉಪಾಧ್ಯಕ್ಷರಾದ ಶಶಿಧರ್ ಸುವರ್ಣ, ಭವಾನಿ ಶೇಖರ್, ಪ್ರಧಾನ ಕಾರ್ಯದರ್ಶಿ ಸುಮಿತ್ರಾ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಕಾಪು ಘಟಕದ ಅಧ್ಯಕ್ಷ ಸಚಿನ್ ಕುಮಾರ್ ಉಚ್ಚಿಲ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷೆ ಸೌಮ್ಯ ರಾಕೇಶ್ ವಂದಿಸಿದರು
08 Aug 2022, 12:57 PM
Category: Kaup
Tags: