ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ
ಕಾಪು : ತಾಲೂಕಿನ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಒಂದು ಮಗುಚಿ ಬಿದ್ದ ಘಟನೆ ಶನಿವಾರ ಸಂಜೆ ಸಂಭವಿಸಿದೆ.
ಮಂಗಳೂರಿನಿಂದ ಉಡುಪಿ ಕಡೆ ಮರದ ತುಂಡುಗಳನ್ನು ಹೇರಿಕೊಂಡು ಸಾಗುತ್ತಿದ್ದ ಟೆಂಪೋ ಪಲ್ಟಿಯಾಗಿದೆ. ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
