ಶಿರ್ವ ಸಂತ ಮೇರಿ ಮಹಾವಿದ್ಯಾಲಯ : 75 ನೇ ಅಮೃತ ಮಹೋತ್ಸವದ ಸಂಭ್ರಮ
Thumbnail
ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2022ರ ಆಗಸ್ಟ್ 15 ರಂದು 76ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದ 75 ನೇ ಅಮೃತ ಮಹೋತ್ಸವ ಪ್ರಯುಕ್ತ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಧ್ವಜಾರೋಹಣವನ್ನು ನೆರವೇರಿಸಿ, ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯವೆಂದರೆ ಇದರ ಹಿಂದಿನ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಕೋಟ್ಯಾಂತರ ಭಾರತೀಯರ ತ್ಯಾಗ-ಬಲಿದಾನ- ಹೋರಾಟದ ಕಥೆ ಇದೆ. ನಮ್ಮ ಯೋಧರ ತ್ಯಾಗಗಳನ್ನು ಸ್ಮರಿಸೋಣ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ನೆನೆಯೋಣ. ನವಸಮಾಜ ನಿರ್ಮಾಣ ಜೊತೆಗೆ ದೇಶಾಭಿವೃದ್ಧಿಗಾಗಿ ಇಂದು ಯುವಕರು ಸರಿಯಾದ ಮಾರ್ಗದರ್ಶನವನ್ನು ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಕಠಿಣ ಪರಿಶ್ರಮ ನೀಡಿ ದೇಶ ಪ್ರಗತಿಗೆ ಕೈಜೋಡಿಸಬೇಕು ಎಂದು ಕರೆ ನೀಡಿ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ಮತ್ತು ಪ್ರಾಮುಖ್ಯತೆಯನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕ್ಯಾಡೆಟ್ ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ಜೂನಿಯರ್ ಅಂಡರ್ ಆಫೀಸರ್ ಸುರಕ್ಷಾ, ಕ್ವಾರ್ಟರ್ ಮಾಸ್ಟರ್ ಮೋಹಿತ್ ಎನ್ ಸಾಲಿಯಾನ್, ಲ್ಲ್ಯಾನ್ಸ್ ಕಾರ್ಪೊರಲ್ ಲೋಬೋ ಆನ್ ರಿಯಾ ನೇವಿಲ್ ಪರೇಡ್ ನ ನೆರವೇರಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಕಚೇರಿನ ಅಧೀಕ್ಷಕ್ಕಿ ಡೋರಿನ್ ಡಿಸಿಲ್ವಾ, ಎನ್ಎಸ್ಎಸ್ ಯೋಜನಾಧಿಕಾರಿ ಶ್ರೀರಕ್ಷಾ, ರೋವರ್ಸ್ ಮತ್ತು ರೇಂಜರ್ಸ್ ಸ್ಕೌಟ್ ಲೀಡರ್ ಗಳಾದ ಪ್ರಕಾಶ್, ಸಂಗೀತ ಪೂಜಾರಿ, ಎನ್ ಎಸ್ ಎಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಿದ್ಯಾರ್ಥಿ ಕಾಲೇಜಿನ ಎಲ್ಲಾ ಭೋಧಕ ಹಾಗು ಭೋಧಕೆತರ ವೃಂದದವರು ಉಪಸ್ಥಿತರಿದ್ದರು. ಎನ್ಎಸ್ಎಸ್ ಯೋಜನಾಧಿಕಾರಿ ಪ್ರೇಮನಾಥ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದ ವಂದಿಸಿದರು. ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್‌ಕುಮಾರ್‌ ರವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿ-ಸಂಯೋಜಿಸಿದರು.
Additional image
15 Aug 2022, 12:45 PM
Category: Kaup
Tags: