ಕಾಪು ತಾಲೂಕು ಪಂಚಾಯತ್ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ
Thumbnail
ಕಾಪು : ಇಲ್ಲಿನ ತಾಲೂಕು ಪಂಚಾಯತ್ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ 76ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕಾಪು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಶಿವ ಪ್ರಕಾಶ್ ಎಸ್ ನೆರವೇರಿಸಿದರು. ಈ ಸಂದರ್ಭ ಅವರು ಎಲ್ಲರಿಗೂ ಶುಭಾಶಯಗಳನ್ನು ತಿಳಿಸುತ್ತಾ ಹಿರಿಯರ ಹಾಗೂ ಯೋಧರ ತ್ಯಾಗ ಬಲಿದಾನವನ್ನು ಸ್ಮರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಚಂದ್ರಕಲಾರವರು ಎಲ್ಲರನ್ನು ಸ್ವಾಗತಿಸಿದರು. ಈ‌ಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
15 Aug 2022, 06:07 PM
Category: Kaup
Tags: