ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಿಂದ ಜಾಥಾ
Thumbnail
ಪಡುಬಿದ್ರಿ : 75 ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪ್ರಧಾನ ಕಚೇರಿ ಸಹಕಾರ ಸಂಗಮದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವೃಂದ, ದೈನಿಕ ಠೇವಣಿ ಸಂಗ್ರಹಗಾರರು, ಸರಾಫರು ಹಾಗೂ ಭದ್ರತಾ ಸಿಬ್ಬಂದಿಗಳು ಗಾಂಧಿ ಟೋಪಿ ಧರಿಸಿ ಹಾಗೂ ತ್ರಿವರ್ಣ ಧ್ವಜದೊಂದಿಗೆ ಸೊಸೈಟಿಯ ಪ್ರಧಾನ ಕಚೇರಿಯಿಂದ ಪಡುಬಿದ್ರಿ ನಾರಾಯಣ ಗುರು ಸಂಘದವರೆಗೆ ಜಾಥಾವನ್ನು ನಡೆಸಿ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ ದಿನಾಚರಣೆಯ ಅಮೃತಮಹೋತ್ಸವವನ್ನು ಆಚರಿಸಿದರು.
Additional image
16 Aug 2022, 11:11 PM
Category: Kaup
Tags: