ಆಗಸ್ಟ್ 19 : ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾ ಮಟ್ಟದ ಶ್ರೀಕೃಷ್ಣ ಜಯಂತಿ ಆಚರಣೆ
Thumbnail
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಶ್ರೀಕೃಷ್ಣ ಜಯಂತಿ ಆಚರಣೆಯು ಆಗಸ್ಟ್ 19 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘದ ಅಧ್ಯಕ್ಷ ದಯಾನಂದ ಬಿ.ಆರ್ ಭಾಗವಹಿಸಲಿದ್ದು, ನಿಟ್ಟೆ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಅಕ್ಷಯಾ ಗೋಖಲೆ ಉಪನ್ಯಾಸ ನೀಡಲಿದ್ದಾರೆ.
17 Aug 2022, 10:29 PM
Category: Kaup
Tags: