ಆಗಸ್ಟ್ 21 : ಯುವವಾಹಿನಿ ಅಂತರ್ ಘಟಕಗಳ ಸಾಂಸ್ಕೃತಿಕ ಕಾರ್ಯಕ್ರಮ - ಡೆನ್ನಾನ ಡೆನ್ನನ
ಕಾಪು : ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಯುವವಾಹಿನಿಯು ಪ್ರತಿವರ್ಷ ನಡೆಸುತ್ತಾ ಬಂದಿರುವ ಅಂತರ್ ಘಟಕ ಸಾಂಸ್ಕೃತಿಕ ಕಾರ್ಯಕ್ರಮವಾಗಿರುವ ಡೆನ್ನಾನ ಡೆನ್ನನ ಆಗಸ್ಟ್ 21 ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಗ್ರಹದಲ್ಲಿ ನಡೆಯಲಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಉದಯ್ ಕುಮಾರ್ ಮಟ್ಟು ತಿಳಿಸಿದರು.
ಇವರು ಕಾಪು ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ದಿನಪೂರ್ತಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರು ಸೇರಿದಂತೆ ಅಂತರ್ ಜಿಲ್ಲೆಯಲ್ಲಿ 33 ಘಟಕಗಳು ಹೊಂದಿರುವ ಎಲ್ಲಾ ಸದಸ್ಯರ ಪ್ರತಿಭೆ ಅನಾವರಣಗೊಳ್ಳಲಿದೆ.
ವಿಜೇತ ತಂಡಗಳಿಗೆ ಪ್ರಶಸ್ತಿ ಫಲಕದೊಡನೆ ಪ್ರಥಮ, ದ್ವಿತೀಯ, ತ್ರತೀಯ ಕ್ರಮವಾಗಿ 25,000, 15,000, 10000 ಹಾಗೂ ವೈಯಕ್ತಿಕವಾಗಿ ಶ್ರೇಷ್ಠ ನಿರ್ವಹಣೆ ನೀಡಿದ 4 ಸ್ಪರ್ಧಿಗಳಿಗೆ ಮತ್ತು ಎರಡು ಬಾಲ ಪ್ರತಿಭೆಗಳಿಗೆ ವಿಶೇಷ ಬಹುಮಾನ ನೀಡಲಾಗುತ್ತದೆ ಎಂದರು.
ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್ ಶಂಕರ ಪೂಜಾರಿ, ಬಿಲ್ಲವ ಮಹಾ ಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಲೀಲಾಕ್ಷ ಕರ್ಕೇರ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಪೂರ್ಣಿಮಾ ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದ ಲ್ಲಿ ಮುಖ್ಯ ಅತಿಥಿ ಗಳಾಗಿ ಕೋಟ ಶ್ರೀನಿವಾಸ ಪೂಜಾರಿ, ವಿನಯ್ ಕುಮಾರ್ ಸೊರಕೆ, ಸುರೇಶ್ ಶೆಟ್ಟಿ ಗುರ್ಮೆ,ಯಶ್ ಪಾಲ್ ಸುವರ್ಣ, ದೀಪಕ್ ಕುಮಾರ್ ಎರ್ಮಾಳ್, ಕಾಪು ಪ್ರಭಾಕರ್ ಪೂಜಾರಿ, ಯು.ಶಿವಾನಂದ, ಪ್ರವೀಣ್ ಡಿ.ಪೂಜಾರಿ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಗದೀಶ್, ಪ್ರವೀಣ್ ಡಿ.ಪೂಜಾರಿ, ಸಂತೋಷ ಪೂಜಾರಿ, ಅಶೋಕ್ ಕೋಟ್ಯಾನ್, ಮಹಾಬಲ ಅಮೀನ್, ದಯಾನಂದ ಕರ್ಕೇರ ಉಪಸ್ಥಿತರಿದ್ದರು.
