ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರಾಜಿನಾಮೆ
Thumbnail
ಶಿರ್ವ: ಕೆ ಆರ್ ಪಾಟ್ಕರ್ ರವರು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ವೈಯುಕ್ತಿಕ ಕಾರಣಗಳಿಗಾಗಿ ರಾಜಿನಾಮೆ ನೀಡಿದ್ದು ಪಂಚಾಯತ್ ಸದಸ್ಯನಾಗಿ ಮುಂದುವರಿಯುವುದಾಗಿ ತಿಳಿಸಿರುವ ಅವರು ತನ್ನ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲಾ ಗ್ರಾಮಸ್ಥರಿಗೆ, ದಾನಿಗಳಿಗೆ, ಹಿತೈಷಿಗಳಿಗೆ ಕೃತಜ್ಞತೆಯನ್ನು ತಿಳಿಸಿದ್ದಾರೆ. ಸಹಾಯಕ ಕಮಿಷನರ್ ಉಪ ವಿಭಾಗ ಕುಂದಾಪುರ ಇವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದು ಇದೀಗ ಅದು ಅಂಗೀಕಾರಗೊಂಡಿದೆ ಎಂದು ತಿಳಿಸಿದ್ದಾರೆ.
19 Aug 2022, 06:57 PM
Category: Kaup
Tags: