ಯುವವಾಹಿನಿ : ಅಂತರ್ ಘಟಕಗಳ ಸಾಂಸ್ಕೃತಿಕ ಕಾರ್ಯಕ್ರಮ -ಡೆನ್ನಾನ ಡೆನ್ನನ -2022ಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ
ಕಟಪಾಡಿ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಅತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಆದಿತ್ಯವಾರ ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಗ್ರಹದಲ್ಲಿ ಯುವವಾಹಿನಿಯ ಅಂತರ್ ಘಟಕಗಳ ಸಾಂಸ್ಕೃತಿಕ ಕಾರ್ಯಕ್ರಮ ಡೆನ್ನಾನ ಡೆನ್ನನ ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್
ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಪ್ರತಿಭೆಗಳಿಗೆ ಅವಕಾಶ ಕಡಿಮೆ. ಸೂಕ್ತ ಅವಕಾಶದ ಅನಿವಾರ್ಯವಿದೆ. ಯುವವಾಹಿನಿ ರಾಜ್ಯ, ರಾಷ್ಟ್ರ ಮಟ್ಟಕ್ಕೆ ಪ್ರತಿಭೆಗಳನ್ನು ಅಣಿಗೊಳಿಸುತ್ತಿದೆ. ಭಾಷೆ, ಸಂಸ್ಕೃತಿಯಿಂದ ಉತ್ತಮ ನಡವಳಿಕೆ ಮೂಡಲು ಸಾಧ್ಯ. ಸಮಾಜವನ್ನು ಸಾಂಸ್ಕೃತಿಕ ಚಟುವಟಿಕೆಯಿಂದ ತಿದ್ದಬಹುದು. ನಮ್ಮ ನಡವಳಿಕೆಯನ್ನು ರೂಪಿಸಲು ಸಾಂಸ್ಕೃತಿಕ ಚಟುವಟಿಕೆಗಳು ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಯೊಂದಿಗೆ ಯುವವಾಹಿನಿ ಸಂಘಟನೆ ಮುಂಚೂಣಿಯಲ್ಲಿದೆ ಎಂದರು.
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ವಿಜೇತ ಗುರುರಾಜ್ ಪೂಜಾರಿಯವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಮಂಗಳೂರು ಇದರ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್ ಶಂಕರ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ, ಕಾಮನ್ ವೆಲ್ತ್ ಗೇಮ್ಸ್ ಪದಕ ವಿಜೇತ ಗುರುರಾಜ್ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿಲ್ಪ ಸುವರ್ಣ, ಉಡುಪಿ ಯುವವಾಹಿನಿ ಘಟಕದ ಕಾರ್ಯದರ್ಶಿ ದಯಾನಂದ ಕರ್ಕೇರ, ಕಾರ್ಯಕ್ರಮ ಸಂಚಾಲಕರಾದ ಮಹಾಬಲ ಅಮೀನ್, ಅಶೋಕ್ ಕೋಟ್ಯಾನ್ ಉಪಸ್ಥಿತರಿದ್ದರು.
ಉಡುಪಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾದ ಜಗದೀಶ್ ಸ್ವಾಗತಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರಸ್ತಾವಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.
