ಉಡುಪಿ ಜಿಲ್ಲಾ ರಜತ ಮಹೋತ್ಸವ ವೆಬ್ಸೈಟ್ ; ಲಾಂಭನ ಬಿಡುಗಡೆ
Thumbnail
ಉಡುಪಿ : ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮದ ವೆಬ್ಸೈಟ್ ಮತ್ತು ಲಾಂಛನವನ್ನು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ವೆಬ್ಸೈಟ್ ನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದ ಲಾಂಛನವನ್ನು ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಎಎಸ್ಪಿ ಎಸ್.ಟಿ ಸಿದ್ಧಲಿಂಗಪ್ಪ, ಕುಂದಾಪುರ ಸಹಾಯಕ ಕಮೀಷನರ್ ರಾಜು ಕೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
22 Aug 2022, 08:37 PM
Category: Kaup
Tags: