ಕಾಪು : ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಎರಡನೇ ವರ್ಷದ ಡಿಪ್ಲೋಮಾ ಪ್ರವೇಶಾತಿ ಅವಧಿ ವಿಸ್ತರಣೆ
ಕಾಪು : ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಕಡಿಮೆ ಪ್ರವೇಶ ಶುಲ್ಕದೊಂದಿಗೆ ಪ್ರವೇಶ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 30 ರ ವರೆಗೆ ವಿಸ್ತರಿಸಲಾಗಿದೆ.
ಎರಡನೇ ವರ್ಷದ ಮೂರನೇ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಾತಿಗೆ ಎರಡು ವರ್ಷಗಳ ಐ.ಟಿ.ಐ, ದ್ವಿತೀಯ ಪಿ.ಯು.ಸಿ ವಿಜ್ಞಾನ ಹಾಗೂ ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಆಟೋಮೇಷನ್ ಅಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಅಂಡ್ ಬಿಗ್ ಡೇಟಾ ಎಂಬ ಕೋರ್ಸುಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಯಲ್ಲಿ ಆಫ್ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು : ಮೊಬೈಲ್ ಸಂಖ್ಯೆ : 9480773870, 9945759720 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
