ಪಡುಬೆಳ್ಳೆಯಲ್ಲಿ ಉಡುಪಿ ವಲಯ ಮಟ್ಟದ ಪ್ರೌಢ ಶಾಲಾ ಬಾಲಕರ ಕಬಡ್ಡಿ ಪಂದ್ಯಾಟ
ಕಾಪು : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತು ಸಾಕ್ಷಾರತ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ, ಪಡುಬೆಳ್ಳೆ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ ಇದರ ಸಹಯೋಗದಲ್ಲಿ ಶುಕ್ರವಾರ ಶಾಲಾ ಮೈದಾನದಲ್ಲಿ ಉಡುಪಿ ವಲಯ ಮಟ್ಟದ ಪ್ರೌಢ ಶಾಲಾ ಬಾಲಕರ ಕಬಡ್ಡಿ ಪಂದ್ಯಾಟ ಜರಗಿತು.
ಬೆಳ್ಳೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಶಶಿಧರ್ ವಾಗ್ಲೆ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಕಾಪು ಚಂದ್ರಶೇಖರವರು ಅಧ್ಯಕ್ಷತೆ ವಹಿಸಿದ್ದರು. ಉಡುಪಿ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗೋಪಾಲ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿ ಶುಭ ಹಾರೈಸಿದರು.
ಕಾಪು ಯುವಜನ ಸೇವಾ ಮತು ಕ್ರೀಡಾ ಇಲಾಖೆಯ ಅಧಿಕಾರಿ ರಿತೇಶ್ ಕುಮಾರ್ ಶೆಟ್ಟಿ, ತಾಲ್ಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ್. ಕೆ. ಸುವರ್ಣ, ಉಡುಪಿ ತಾಲ್ಲೂಕು ಗ್ರೇಡ್ ೧ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ಸಾಲಿಯಾನ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿನಕರ್ ಭಂಡಾರಿ, ಕನ್ನಡ ಮಾಧ್ಯಮ ಮುಖ್ಯ ಶಿಕ್ಷಕಿ ಉಷಾ. ಎಸ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಜಿನ್ ರಾಜ್ ಸಾಲಿಯಾನ್ ಸ್ವಾಗತಿಸಿದರು. ದೈಹಿಕ ಶಿಕ್ಷಕಿ ಸುಮಂಗಲ ವಂದಿಸಿದರು. ದೈಹಿಕ ಶಿಕ್ಷಕ ಸುರೇಶ ದೇವಾಡಿಗ ಕಾರ್ಯಕ್ರಮ ಸಂಯೋಜಿಸಿದರು. ವೀಣಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
ಸಮಾರೋಪ ಸಮಾರಂಭದಲ್ಲಿ ಶ್ರೀ ಹರೀಶ್ ಶೆಟ್ಟಿ, ಬೆಳ್ಳೆ ಪಂಚಾಯತ್ ಸದಸ್ಯರು, ವಿಜೇತರಿಗೆ ಬಹುಮಾನ ವಿತರಿಸಿದರು.
ಪಂದ್ಯಾಟದಲ್ಲಿ ಮೂಳೂರು ಅಲ್ ಇಶಾನ್ ಆಂಗ್ಲ ಮಾಧ್ಯಮ ಶಾಲೆ ಪ್ರಥಮ, ಉಡುಪಿ ಕ್ರಿಶ್ಚಿಯನ್ ಪ್ರೌಢಶಾಲೆ ದ್ವಿತೀಯ ಬಹುಮಾನ ಪಡೆಯಿತು.
ಅಲ್ ಇಶಾನ್ ಶಾಲೆಯ ಮಹಮ್ಮದ್ ಅನಸ್ ಬೆಸ್ಟ್ ಅಲ್ ರೌಂಡರ್ , ಮಹಮ್ಮದ್ ಸುಹಾನ್ ಬೆಸ್ಟ್ ಕ್ಯಾಚರ್ ಮತ್ತು ಕ್ರಿಶ್ಚಿಯನ್ ಪ್ರೌಢ ಶಾಲೆಯ ದೀಪಕ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದರು.
