ಕಾಪು : ಸಾರ್ವಜನಿಕ ಗಣೇಶೋತ್ಸವ ಸಮಿತಿಗಳೊಂದಿಗೆ ಡಿವೈಎಸ್ಪಿ ಸಮಾಲೋಚನ ಸಭೆ
ಕಾಪು : ಸಾರ್ವಜನಿಕವಾಗಿ ಗಣೇಶೋತ್ಸವ ನಡೆಸುವ ಕಾಪು, ಪಡುಬಿದ್ರಿ, ಶಿರ್ವ ಠಾಣಾವ್ಯಾಪ್ತಿಯ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಜೊತೆ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್ ರವರು ಶನಿವಾರ ಕಾಪು ವೀರಭದ್ರ ಸಭಾಭವನದಲ್ಲಿ ಸಮಾಲೋಚನ ಸಭೆ ನಡೆಸಿದರು.
ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಚರಿಸುವ ಮಂಡಳಿಯವರು ಶಾಂತಿಯುತವಾಗಿ ಗಣೇಶೋತ್ಸವ ಆಚರಿಸಬೇಕು. ಧ್ವನಿವರ್ಧಕದ ಬಳಕೆಯನ್ನು ಆದಷ್ಟು ಕಡಿಮೆ ಶಬ್ದದಲ್ಲಿ ಉಪಯೋಗಿಸಬೇಕು.
ಯಾವುದೇ ಕಾರಣಕ್ಕೂ ಇತರ ಧರ್ಮೀಯರಿಗೆ ನೋವುಂಟುಮಾಡುವ ಕೆಲಸ ಮಾಡಬಾರದು.
ಮೆರವಣಿಗೆಯ ಸಂದರ್ಭ ಅನ್ಯ ಜಾತಿಯವರ ವಿರುದ್ಧ ಪೋಷಣೆ ಕೂಗಬಾರದು ಎಂಬ ಹತ್ತು ಹಲವು ಮಾನದಂಡಗಳನ್ನು ಗಣೇಶೋತ್ಸವ ಸಮಿತಿಯವರಿಗೆ ನೀಡಿದ್ದಾರೆ.
ಈ ಸಂದರ್ಭ ಕಾಪು ವೃತ್ತ ನಿರೀಕ್ಷಕ ಕೆ ಸಿ ಪೂವಯ್ಯ, ಕಾಪು ಠಾಣಾಧಿಕಾರಿ ಶ್ರೀಶೈಲ ಮುರುಗೋಡ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ, ಶಿರ್ವ ಠಾಣಾಧಿಕಾರಿ ರಾಘವೇಂದ್ರ ಸಿ, ಪ್ರೊಬೆಷನರಿ ಎಸ್ಐ ಮಹಾಂತೇಶ, ಕಾಪು, ಪಡುಬಿದ್ರಿ ಮತ್ತು ಶಿರ್ವ ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
