ಪಡುಬಿದ್ರಿ : ಮಾದಕ ವ್ಯಸನಿಗಳು ಪೊಲೀಸ್ ವಶಕ್ಕೆ
ಪಡುಬಿದ್ರಿ : ಕಾಪು ತಾಲೂಕಿನ ಬಡಾ ಗ್ರಾಮದ ಬಾಂಗ್ಲ ಎಂಬಲ್ಲಿ ಈರ್ವರನ್ನು ಮತ್ತು ನಡ್ಸಾಲು ಗ್ರಾಮದ ಕಂಚಿನಡ್ಕದಲ್ಲಿ ಒರ್ವನನ್ನು ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ತೂರಾಡುತ್ತಿದ್ದ ಬಗ್ಗೆ ಅನುಮಾನಗೊಂಡು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಗಸ್ಟ್ 30ರಂದು ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪುರುಷೋತ್ತಮ ಎ
ಕಾಪು ತಾಲೂಕು ಬಡಾ ಗ್ರಾಮದ ಬಾಂಗ್ಲ ಎಂಬಲ್ಲಿ ಮಹಮ್ಮದ್ ಫವಾಜ್ (18), ಮಹಮ್ಮದ್ ಅಫ್ಜಲ್(22) ಮತ್ತು ನಡ್ಸಾಲು ಗ್ರಾಮದ ಕಂಚಿನಡ್ಕ ಎಂಬಲ್ಲಿ ಗುರುನಾಥ ಆರ್ (23) ಎಂಬುವವರ ಬಗ್ಗೆ ಅನುಮಾನಗೊಂಡು ವಶಕ್ಕೆ ಪಡೆದುಕೊಂಡು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರ ಎದುರು ಹಾಜರುಪಡಿಸಿ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು ಮೂವರು ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದಾಗಿ ಸೆಪ್ಟೆಂಬರ್ 02 ರಂದು ವೈದ್ಯರು ದೃಢಪಡಿಸಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
