ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್ : ಕಾನೂನು ಮಾಹಿತಿ , ಪತ್ರಿಕೆ ವಿತರಕರ ದಿನಾಚರಣೆ, ಪೋಷಣ್ ಅಭಿಯಾನ, ಆರೋಗ್ಯ ಮಾಹಿತಿ
Thumbnail
ಬಂಟಕಲ್ಲು : ಇಲ್ಲಿನ ಲಯನ್ಸ್ ಕ್ಲಬ್ ಜಾಸ್ಮಿನ್ ಇವರ ಆಶ್ರಯದಲ್ಲಿ ಬಂಟಕಲ್ಲು ಅಂಗನವಾಡಿ ಕೇಂದ್ರದ ಸಹಯೋಗದಲ್ಲಿ ಮಹಿಳಾ ಕಾನೂನು ಮಾಹಿತಿ, ಪತ್ರಿಕಾ ವಿತರಕರ ದಿನಾಚರಣೆ ಹಾಗೂ ಪೋಷಣ್ ಅಭಿಯಾನ , ಆರೋಗ್ಯ ಮಾಹಿತಿ ಕಾರ್ಯಕ್ರಮವು ಬಂಟಕಲ್ಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಧೀಶೆ, ಜಿಲ್ಲಾ ಕಾನೂನು ಸೇವೆಗಳ ಕಾನೂನು ಪ್ರಾಧಿಕಾರ ಉಡುಪಿ ಇದರ ಸದಸ್ಯ ಕಾರ್ಯದರ್ಶಿ ಶರ್ಮಿಳಾರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಹಿಳೆಯರ ಕಾನೂನುಗಳು ಮತ್ತು ಅದರ ಅಗತ್ಯತೆ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಕೇಂದ್ರದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ವೈಷ್ಣವಿಯವರು ಪೋಷಣ್ ಅಭಿಯಾನ ಮತ್ತು ಸಾಮಾನ್ಯ ಆರೋಗ್ಯ ಮಾಹಿತಿ ನೀಡಿದರು. ಪತ್ರಿಕಾ ವಿತರಕರ ದಿನಾಚರಣೆಯ ಹಾಗು ಶಿರ್ವ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿದ್ದ ಕೆ ಆರ್ ಪಾಟ್ಕರ್ ರವರನ್ನು ಲಯನ್ಸ್ ಕ್ಲಬ್ ಹಾಗೂ ಅಂಗನವಾಡಿ ಕೇಂದ್ರದ ಪರವಾಗಿ ನ್ಯಾಯಧೀಶೆ ಶರ್ಮಿಳಾರವರು ಸನ್ಮಾನಿಸಿದರು. ಕೆ ಆರ್ ಪಾಟ್ಕರ್ ರವರು ಸನ್ಮಾನಕ್ಕೆ ಕೃತಜ್ಞತೆಯನ್ನು ತಿಳಿಸಿದರು. ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಅಂಗನವಾಡಿ ಮೇಲ್ವಿಚಾರಕಿ ಶಶಿಕಲಾರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷೆ ರೀನಾ ಡಿ ಸೋಜ, ಬಂಟಕಲ್ಲು ಶಾಲಾ ಮುಖ್ಯ ಶಿಕ್ಷಕಿ ಸಂಗೀತಾ ಪಾಟ್ಕರ್, ಅಂಗನವಾಡಿ ಕಾರ್ಯಕರ್ತೆಯರಾದ ವಿನಯಾ ಹರೀಶ್, ಉಷಾ ಪಾಟ್ಕರ್, ಜಯಂತಿ, ಲ ಐರಿನ್ ಸಿಕ್ವೇರಾ ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷರು, ಸದಸ್ಯರು, ಮಕ್ಕಳ ಹೆತ್ತವರು ಉಪಸ್ಥಿತರಿದ್ದರು. ಲಯನ್ಸ್ ಕಾರ್ಯದರ್ಶಿ ಅನಿತಾ ಮೆಂಡೋನ್ಸಾ ಕಾರ್ಯಕ್ರಮ ನಿರೂಪಿಸಿದರು. ವಿನಯಾ ವಂದಿಸಿದರು.
Additional image Additional image
07 Sep 2022, 04:46 PM
Category: Kaup
Tags: