ಬಾಸ್ಕೆಟ್ ಬಾಲ್ ಪಂದ್ಯಾಟ : ಶಂಕರಪುರ ಸೈಂಟ್ ಜೋನ್ಸ್ ಅಕಾಡೆಮಿ ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರು ವಿಭಾಗಮಟ್ಟಕ್ಕೆ ಆಯ್ಕೆ
Thumbnail
ಕಾಪು : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ, ಇವರ ಸಹಯೋಗದಲ್ಲಿ ಆಯೋಜಿಸಿದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಶಂಕರಪುರ ಸೈಂಟ್ ಜೋನ್ಸ್ ಅಕಾಡೆಮಿ ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತ ತಂಡದೊಂದಿಗೆ ಶಾಲಾ ಸಂಚಾಲಕರಾದ ವಂದನೀಯ ಫಾದರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಮುಖ್ಯೋಪಾದ್ಯಾಯಿನಿ ಸಿಸ್ಟರ್ ಸರಿತಾ ಡಿಸೋಜಾ, ದೈಹಿಕ ಶಿಕ್ಷಕರಾದ ಸದಾಶಿವ ಆಚಾರ್ಯ ಉಪಸ್ಥಿತರಿದ್ದರು.
14 Sep 2022, 08:36 PM
Category: Kaup
Tags: