ಕಟಪಾಡಿ : ವಿದ್ಯಾರ್ಥಿಗೆ ಬಸ್ ಡಿಕ್ಕಿ ; ಆಸ್ಪತ್ರೆಗೆ ದಾಖಲು
ಕಟಪಾಡಿ : ಶಾಲೆ ಬಿಟ್ಟು ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಸ್ಸು ಡಿಕ್ಕಿಯಾದ ಘಟನೆ ಶುಕ್ರವಾರ ಸಂಜೆ ಘಟಿಸಿದೆ.
ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಪೋಸಾರು ಜಂಕ್ಷನ್ ನಲ್ಲಿ ಸೈಕಲಿನಲ್ಲಿ ರಸ್ತೆ ದಾಟುತ್ತಿದ್ದಾಗ ಬಸ್ಸೊಂದು ಡಿಕ್ಕಿಯಾಗಿ ಬಾಲಕ ಗಂಭೀರ ಗಾಯಗೊಂಡಿದ್ದು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಬಾಲಕನನ್ನು ಕಟಪಾಡಿಯ ಎಸ್‌ವಿಎಸ್ ಶಾಲಾ 7 ನೇ ತರಗತಿಯ ವಿದ್ಯಾರ್ಥಿ ಪ್ರಥಮ್ ಶೆಣೈ ಎಂದು ಗುರುತಿಸಲಾಗಿದೆ.
ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
