ಮಾದಕ ಪದಾರ್ಥ ಬಳಕೆಯ ವಿರುದ್ಧ ಜನಜಾಗೃತಿ ಅಭಿಯಾನ ಕಾರ್ಯಕ್ರಮ
ಕಾಪು : ಮೂಳೂರ್ ಜುಮಾ ಮಸೀದಿ ಹಾಗು ಸಿರಾಜುಲ್ ಇಸ್ಲಾಂ ಅರಬಿ ಮದ್ರಸ ಮೂಳೂರ್ ಇದರ ಜಂಟಿ ಆಶ್ರಯದಲ್ಲಿ ಇಂಲೈಟ್ ವೆಲ್ನೆಸ್ ಸೆಂಟರ್ ಕುತ್ತಾರ್ ಮಂಗಳೂರು ಇದರ ಸಹಯೋಗದೊಂದಿಗೆ ಮಾದಕ ಪದಾರ್ಥ ಬಳಕೆಯ ವಿರುದ್ಧ ಜನ ಜಾಗೃತಿ ಅಭಿಯಾನ ಕಾರ್ಯಕ್ರಮವು ಜುಮಾ ಮಸೀದಿ ಕ್ಯಾಂಪಸ್ ನಲ್ಲಿ ಜರುಗಿತು.
ಮಸೀದಿ ಅಧ್ಯಕ್ಷ ಸೈಯದ್ ಮುರಾದ್ ಅಲಿ ಅಧ್ಯಕ್ಷತೆಯನ್ನು ವಹಿಸಿದ್ದರು. ಖತೀಬರಾದ ಹಫೀಳ್ ಅಶ್ರಫ್ ಸಖಾಫಿ ದುವಾ ನೆರವೇರಿಸಿದರು. ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ ಪೂವಯ್ಯರವರು ಮಾದಕ ಪದಾರ್ಥ ಬಳಕೆಯಿಂದಾಗುವ ಅನಾಹುತಗಳ ಬಗ್ಗೆ ವಿವರಿಸಿ ಇಂದಿನ ಕಾಲಘಟ್ಟದಲ್ಲಿ ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ ಎಂದು ಕಾರ್ಯಕ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ತರಬೇತುದಾರ ಬಹುಮಾನ್ಯ ಇಬ್ರಾಹಿಂ ಖಲೀಲ್ ರವರು ಲಹರಿಪದಾರ್ಥಗಳ ದಾಸರಾಗುವುದರಿಂದಾಗುವ ಅನಾಹುತಗಳ ಬಗ್ಗೆ ಹಾಗೂ ಪೋಷಕರು ತಮ್ಮ ಮಕ್ಕಳನ್ನು ಅದರಿಂದ ತಡೆಯಲು ಪೋಷಕರು ತೆಗೆದುಕೊಳ್ಳಬಹುದಾದ ಉಪಾಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ಮದ್ರಸ ಅಧ್ಯಕ್ಷ ಅಹ್ಮದ್ ಬಾವ ವೈ.ಬಿ.ಸಿ, ಸದ್ರ್ ಉಸ್ತಾದ್ ಅಬ್ದುಲ್ ಲತೀಫ್ ಸಅದಿ , ಎಂ.ಎ. ಗಫೂರ್ ಉಪಸ್ಥಿತರಿದ್ದರು.
ವೈ.ಬಿ.ಸಿ. ಬಷೀರ್ ಅಲಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಎಸ್ ಆರ್ ರಫೀಕ್ ವಂದಿಸಿದರು.
