ಉಚ್ಚಿಲ ದಸರಾ : ವಿದ್ಯುತ್ ದೀಪಾಲಂಕಾರದ ಉದ್ಘಾಟನೆ
Thumbnail
ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಉತ್ಸವದ ಪೂರ್ವ ಭಾವಿಯಾಗಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಸುಮಾರು 17 ಕಿಮೀ ಉದ್ದಕ್ಕೆ ವಿದ್ಯುತ್ ದೀಪ ಅಲಂಕಾರದ ಉದ್ಘಾಟನೆಯನ್ನು ನಾಡೋಜ ಜಿ.ಶಂಕರ್‌ ರವರು ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು ಸಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ಉಚ್ಚಿಲ ದಸರಾ ಉತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ಕರ್ನಾಟಕದ ಇತರ ಕಡೆಗಳಲ್ಲಿ ಜರಗುವಂತೆ ಇಲ್ಲಿ ಕೂಡ ಅತ್ಯಂತ ವಿಜೃಂಭಣೆಯಿಂದ ದಸರಾ ಆಚರಿಸಲು ನಮ್ಮ ಸಮಿತಿ ಎಲ್ಲ ಏರ್ಪಾಟು ಮಾಡಿದ್ದಾರೆ. ಪ್ರತಿದಿನ ಅನ್ನಸಂತರ್ಪಣೆ ಕಾರ್ಯಕ್ರಮ ಕೂಡಾ ಇರುತ್ತದೆ. ವಿದ್ಯುತ್ ಅಲಂಕಾರ ಸಾಂಕೇತಿಕವಾಗಿ ಇಂದು ಉದ್ಘಾಟನೆ ಮಾಡಿದ್ದೇವೆ. ಜಲಸ್ತಂಭನ ಕಾರ್ಯಕ್ರಮ ವಿನೂತನ ರೀತಿಯಲ್ಲಿ ನವದುರ್ಗೆಯರ ಹಾಗೂ ಶಾರದಾ ಮೂರ್ತಿಗಳನ್ನು ಇಲ್ಲಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಹೆಜಮಾಡಿ ತನಕ ಹೋಗಿ ವಾಪಾಸು ಕಾಪು ತನಕ ಟ್ಯಾಬ್ಲೋ ಸಹಿತ ಮೆರವಣಿಗೆಯ ಮ‌ೂಲಕ ದೀಪಸ್ತಂಭದ ಬಳಿ ಸಮುದ್ರದಲ್ಲಿ ಜಲಸ್ಥಂಭನೆ ಮಾಡಲಾಗುವುದು ಎಂದರು. ಈ ಸಂದರ್ಭ ದೇವಳದ ಆಡಳಿತ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.
24 Sep 2022, 08:48 PM
Category: Kaup
Tags: