ಕಾಪು ಗ್ರಾಮದಾದ್ಯಂತ ಇಂದು ತೆನೆ ಹಬ್ಬ ಆಚರಣೆ
ಕಾಪು : ಗ್ರಾಮದಾದ್ಯಂತ ಸೋಮವಾರ ತೆನೆ
ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಗ್ರಾಮಸ್ಥರು ಮತ್ತು ಪುರೋಹಿತರು ಗದ್ದೆಯಿಂದ ಬೆಳಿಗ್ಗೆ ನಾಲ್ಕು ಗಂಟೆಯ ಸುಮಾರಿಗೆ ತೆನೆಗಳನ್ನು ಸಂಗ್ರಹಿಸಿ, ಪಲ್ಲಕ್ಕಿಯಲ್ಲಿ ಕಾಪುವಿನ ಸಾವಿರ ಸೀಮೆಯ ಒಡೆಯ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ತರಲಾಯಿತು.
ದೇವಳದ ಪ್ರಧಾನ ಅರ್ಚಕ ಜನಾರ್ಧನ ತಂತ್ರಿಯವರು ಪೂಜಾ ವಿಧಿ ವಿಧಾನಗಳನ್ನು ಪೂರೈಸಿದ ಬಳಿಕ ಗ್ರಾಮದ ಜನರಿಗೆ ತೆನೆಗಳನ್ನು ವಿತರಿಸಿದರು.
ಈ ಸಂದರ್ಭ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದು, ತೆನೆ ಸ್ವೀಕರಿಸಿದರು.
