ಇನ್ನಂಜೆ : ಎಸ್ ವಿ ಎಸ್ ಮತ್ತು ಎಸ್ ವಿ ಎಚ್ ಶಾಲೆಯಲ್ಲಿ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ; ಶ್ರಮದಾನ
ಇನ್ನಂಜೆ : ಎಸ್ ವಿ ಎಸ್ ಮತ್ತು ಎಸ್ ವಿ ಎಚ್ ಆಂಗ್ಲ ಮಾಧ್ಯಮ ನರ್ಸರಿ ಮತ್ತು ಹೈಯರ್ ಪ್ರೈಮರಿ ಶಾಲೆ ಇನ್ನಂಜೆ ಇಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನವನ್ನು ಶಾಲಾ ಆಡಳಿತಾಧಿಕಾರಿ ಅನಂತ ಮೂಡಿತ್ತಾಯರವರು ಉದ್ಘಾಟಿಸಿದರು.
ಮಹಿಳಾ ಮಂಡಳಿ, ಗ್ರಾಮ ಪಂಚಾಯತ್ ಇನ್ನಂಜೆ, ರೋಟರಿಕ್ಲಬ್, ಯುವಕ ಮಂಡಲ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಬಿಲ್ಲವ ಸಂಘ, ಎಸ್ ವಿ ಎಚ್ ಕನ್ನಡ ಮಾಧ್ಯಮ ಸಂಯುಕ್ತಾಶ್ರಯದಲ್ಲಿ ಶಾಲಾ ವಠಾರದಲ್ಲಿ ಶ್ರಮದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಆಶಾ ನಾಯಕ್, ಉಮೇಶ್ ಆಚಾರ್ಯ, ದಿವೇಶ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಸುರೇಶ್ ಶೆಟ್ಟಿ, ಶೇಖರ, ಗುರುರಾಜ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯರಾದ ನಟರಾಜ ಉಪಾಧ್ಯಾಯ, ಸುಷ್ಮಾ, ಮಮತಾ ಹಾಗು ಶಿಕ್ಷಕಿಯರು ಉಪಸ್ಥಿತರಿದ್ದರು.
