ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ಹಾವೇರಿ ಜಿಲ್ಲಾ ಸಹಕಾರಿ ಯೂನಿಯನ್ ತಂಡ ಭೇಟಿ
Thumbnail
ಪಡುಬಿದ್ರಿ : ಇಲ್ಲಿನ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.)ಗೆ ಹಾವೇರಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ಅಧ್ಯಕ್ಷರಾದ ಶಿವಾನಂದ ರಾಮಗೇರಿ ಹಾಗೂ ಆಡಳಿತ ಮಂಡಳಿ ಸದಸ್ಯರನ್ನು ಒಳಗೊಂಡ ಅಧ್ಯಯನ ತಂಡವು ಅಕ್ಟೋಬರ್ 7ರಂದು ಭೇಟಿ ನೀಡಿತು. ಈ ಸಂದರ್ಭ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ ಪೂಜಾರಿ ಹಾಗೂ ನಿರ್ದೇಶಕರಾದ ರಸೂಲ್ ವೈ.ಜಿ. ಸೊಸೈಟಿಯ ಕಾರ್ಯವೈಖರಿ ಬಗ್ಗೆ ಅಧ್ಯನ ತಂಡಕ್ಕೆ ಮಾಹಿತಿ ನೀಡಿದರು. ಹಾವೇರಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಶಿವಾನಂದ ರಾಮಗೇರಿ ಯವರು ಸೊಸೈಟಿಯ ಅಭಿವೃದ್ಧಿ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ, ನಿರ್ದೇಶಕರಾದ ರಸೂಲ್ ವೈ.ಜಿ., ಗಿರೀಶ್ ಪಲಿಮಾರ್, ರಾಜಾರಾಮ್ ರಾವ್, ಯಶವಂತ್ ಪಿ.ಬಿ., ಮಾಧವ ಆಚಾರ್ಯ, ಸ್ಟೇನ್ನಿ ಕ್ವಾಡ್ರಸ್, ಮುಖ್ಯಕಾರ್ಯನಿರ್ವಾಹಣಾಧಿಕಾರಿ ನಿಶ್ಮಿತಾ ಪಿ.ಎಚ್ ಹಾಗೂ ಸಿಬಂದಿ ವೃಂದ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ (ಪ್ರಭಾರ) ಹರೀಶ್‌ ಬಿ., ಸಿಬಂದಿ ವಿಶ್ವನಾಥ್ ಉಪಸ್ಥಿತರಿದ್ದರು.
10 Oct 2022, 12:42 PM
Category: Kaup
Tags: