ಬಂಟಕಲ್ಲು : ಆರ್‌ಎಸ್‌ಬಿ ಯುವವೃಂದದಿಂದ ಧಾರ್ಮಿಕ ಕಾರ್ಯಕ್ರಮ ; ಸಾಧಕರಿಗೆ ಸನ್ಮಾನ
ಬಂಟಕಲ್ಲು : ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೆಶ್ವರೀ ದೇವೀ ಸನ್ನಿಧಿಯಲ್ಲಿ ರಾಜಾಪುರ ಸಾರಸ್ವತ ಯುವವೃಂದ ಇದರ ಆಶ್ರಯದಲ್ಲಿ ಅಕ್ಟೋಬರ್ 16ರಂದು 26ನೇ ವರ್ಷದ ದುರ್ಗಾಹೋಮ ಸೇವೆ, ಧಾರ್ಮಿಕ ಅನುಷ್ಠಾನಗಳು ಕಾರ್ಯಕ್ರಮ ಜರಗಿತು.
ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣ, ಬೆಂಗಳೂರು ಇದರ ಸದಸ್ಯ ಸದಾಶಿವ ಪ್ರಭು ಎಳ್ಳಾರೆ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಶ್ರೀದೇವಳದ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ, ಆಡಳಿತ ಮಂಡಳಿ ಅಧ್ಯಕ್ಷ ಜಯರಾಮ್ ಪ್ರಭು ಗಂಪದಬೈಲು, ನೀರೆ ಗ್ರಾ,ಪಂ.ಅಭಿವೃದ್ಧಿ ಅಧಿಕಾರಿ ಅಂಕಿತಾ ಭಾಗವಹಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಜಿಲ್ಲಾ ವೈಧ್ಯಾಧಿಕಾರಿ ಡಾ.ಮಧುಸೂದನ ನಾಯಕ್, ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕ ದಿನೇಶ್ ನಾಯಕ್ ಮುದರಂಗಡಿ, ಪಿಎಚ್‌ಡಿ ಗೌರವ ಸಾಧಕ ಪ್ರೊ. ವಿಠಲ್ ನಾಯಕ್, ಪುರಾತತ್ವ ಸಂಶೋಧಕ ಸುಭಾಷ್ ನಾಯಕ್ ಬಂಟಕಲ್ಲು, ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ವಿವಿಧ ಕ್ರೀಡಾ ಸ್ಫರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವೃಂದದ ಅಧ್ಯಕ್ಷ ರಾಘವೇಂದ್ರ ನಾಯಕ್ ಪಾಲಮೆ ವಹಿಸಿದ್ದರು.
ಯುವವೃಂದದ ಗೌರವ ಅಧ್ಯಕ್ಷ ಕೆ.ಆರ್.ಪಾಟ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಭೂಮಿಕಾ ಪಾಟ್ಕರ್ ಪ್ರಾರ್ಥಿಸಿದರು. ದೇವದಾಸ್ ಪಾಟ್ಕರ್ ಮುದರಂಗಡಿ, ರಾಮದಾಸ್ ಪ್ರಭು ನಿರೂಪಿಸಿದರು. ಕಾರ್ಯದರ್ಶಿ ಅನಂತರಾಮ ವಾಗ್ಲೆ ವಂದಿಸಿದರು.
