ಕಾಪು : ಕಲ್ಲಿದ್ದಲು ಸಾಗಾಟದ ಟ್ರಕ್‌ನಲ್ಲಿ ಆಕಸ್ಮಿಕ ಬೆಂಕಿ ; ತಪ್ಪಿದ ಭಾರಿ ಅವಘಡ
Thumbnail
ಕಾಪು : ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಟ್ರಕ್‌ಗೆ ಸೋಮವಾರ ತಡರಾತ್ರಿ ಕಾಪುವಿನ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬಂದಿಗಳ‌ ಸಕಾಲಿಕ ಕಾರ್ಯಾಚರಣೆಯಿಂದಾಗಿ ಭಾರಿ ಅವಘಡವೊಂದು ತಪ್ಪಿದಂತಾಗಿದೆ. ಟ್ರಕ್‌ನಲ್ಲಿ ತುಂಬಿದ್ದ ಕಲ್ಲಿದ್ದಲ್ಲಿನಲ್ಲಿ ಘರ್ಷಣೆಯುಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು ಟ್ರಕ್ ಚಾಲಕ ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಡುಪಿ ಅಗ್ನಿಶಾಮಕದಳಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಟ್ರಕ್‌ನ ಮೇಲೇರಿ ಹೊಗೆಯನ್ನು ಸಂಪೂರ್ಣವಾಗಿ ನಂದಿಸುವ ಮೂಲಕ ಮುಂದೆ ಸಂಭವಿಸಬಹುದಾಗಿದ್ದ ಭಾರೀ ಅವಘಡವೊಂದನ್ನು ತಪ್ಪಿಸಿದ್ದಾರೆ.
18 Oct 2022, 10:35 AM
Category: Kaup
Tags: