ರಾಜಕೀಯಕ್ಕೆ ಬಂದದ್ದು ನಾನು ಸನ್ಯಾಸಿಯಾಗಿಯಲ್ಲ. ಸ್ಥಾನಮಾನ ನೀಡಿದರೆ ಅದನ್ನು ಒಪ್ಪಲು ಸಿದ್ಧ - ಶ್ರೀಶ ನಾಯಕ್
ಕಟಪಾಡಿ : ಸಾಮಾಜಿಕ ಕಾರ್ಯದ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ತಂದೆಯವರ ಕಾರ್ಯಕ್ಷಮತೆ, ಬಿಜೆಪಿ ಪಕ್ಷಕ್ಕಾಗಿ ದುಡಿದವರು ಹಾಗಾಗಿ ಅವರ ನಂತರ ಈ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಮುಂದೆ ಪಕ್ಷ ಅವಕಾಶ ನೀಡಿದರೆ ಕೊಟ್ಟಂತಹ ಜವಾಬ್ದಾರಿಯನ್ನು ನಿರ್ವಹಿಸಲಿದ್ದೇನೆ ಎಂದು ಬಿಜೆಪಿ ಪಕ್ಷದ ಯುವ ನಾಯಕ ಶ್ರೀಶ ನಾಯಕ್ ಹೇಳಿದರು.
ನಾನು ಪೆರ್ಣಂಕಿಲದಲ್ಲಿ ಹುಟ್ಟಿದರೂ ಕಾಪು ಕ್ಷೇತ್ರದಲ್ಲಿ 2000ನೇ ಇಸವಿಯಲ್ಲಿ ಪಂಚಾಯತ್ ಸದಸ್ಯನಾಗಿ ಕೆಲಸ ಮಾಡಿದವ ಹಾಗಾಗಿ ಬಿಜೆಪಿ ಪಕ್ಷದ ಯುವಮೋರ್ಚಾದಲ್ಲಿ ಕೆಲಸ ಮಾಡಿದ ಅನುಭವವಿದೆ.
ರಾಜಕೀಯಕ್ಕೆ ಬಂದದ್ದು ನಾನು ಸನ್ಯಾಸಿಯಾಗಿ ಅಲ್ಲ. ಪಕ್ಷ ಏನಾದರೂ ಸ್ಥಾನಮಾನ ನೀಡಿದರೆ ಅದನ್ನು ಒಪ್ಪಲು ಸಿದ್ಧ. ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಎಂಎಲ್ಎ ಅಭ್ಯರ್ಥಿಯಾಗಿ ಅವಕಾಶ ಬಂದರೂ ಸ್ವೀಕರಿಸಲು ತಯಾರಿದ್ದೇನೆ ಎಂದರು.
ಆಕಾಂಕ್ಷಿಗಳ ಪಟ್ಟಿ ಹೆಚ್ಚಿದ್ದರೂ, ಸಮಾಜಮುಖಿ, ಪಕ್ಷದ ಜತೆಗಿನ ಕೆಲಸ ನಿರಂತರ. ಪ್ರಬಲ ಜಾತಿ ಲೆಕ್ಕಾಚಾರ ಬಿಟ್ಟು ಈ ಬಾರಿ ಪಕ್ಷ ಅವಕಾಶ ನೀಡಬಹುದೆಂಬ ಆಶಾಭಾವನೆಯಿದೆ ಎಂದರು.
ಒಟ್ಟಿನಲ್ಲಿ ಈ ಬಾರಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಹಲವು ಮಂದಿ ಆಕಾಂಕ್ಷಿಗಳು ಇದ್ದರೂ ಹೈಕಮಾಂಡ್ ಪ್ರಬಲ ಜಾತಿಗಳಿಗೆ ಮಣೆ ಹಾಕಲಿವೆಯೋ ಅಥವಾ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನಿಗೆ ಮಣೆ ಹಾಕಲಿದೆಯೋ ಕಾದು ನೋಡಬೇಕಿದೆ.
