ಕಾಪು : ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ರ‌್ಯಾಲಿ
Thumbnail
ಕಾಪು : ಮಹಮ್ಮದ್ ಪೈಗಂಬರ ಅವರ ಜನ್ಮದಿನದ ದಿನಾಚರಣೆಯ ಪ್ರಯುಕ್ತ ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ವತಿಯಿಂದ ಶುಕ್ರವಾರ ಸಂಜೆ ಕಾಪುವಿನ ಪೋಲಿಪು, ಜುಮ್ಮಾ ಮಸೀದಿಯ ದರ್ಗಾದಲ್ಲಿ ರ‌್ಯಾಲಿಗೆ ಕಾಪುವಿನ ಖಾಜಿ ಅಲ್ ಹಜ್ ಶೈಖುನಾ ಅಜ್ಮಿದ್ ಮುಸ್ಲಿಯಾರವರು ಚಾಲನೆ ನೀಡಲಾಯಿತು. ರ‌್ಯಾಲಿಯು ಕಾಪು ಪೇಟೆಯಲ್ಲಿ ಸಮಾಪನಗೊಂಡಿತು. ಈ ಸಂದರ್ಭ ನ್ಯಾಯವಾದಿ ಹಂಜತ್ ಹೆಜ್ಮಾಡಿ, ಎಂ.ಕೆ ಇಬ್ರಾಹಿಂ ಮಜೂರು, ಅಬ್ದುಲ್ ಸುಪರ್ಫರ್ ಎಂ. ಕೆ. ಇಬ್ರಾಹಿಂ ಮತ್ತಿತರರು ಉಪಸ್ಥಿತರಿದ್ದರು.
22 Oct 2022, 10:44 AM
Category: Kaup
Tags: