ಕಾಪು : ಪಂಚಾಯತ್ ರಾಜ್ ಮಸೂದೆಗೆ ತಿದ್ದುಪಡಿ - ಕಾಂಗ್ರೆಸ್ ಪ್ರತಿಭಟನೆ
Thumbnail
ಕಾಪು : ಪಂಚಾಯತ್ ರಾಜ್ ಮಸೂದೆಗೆ ತಿದ್ದುಪಡಿ ಮಾಡಿ ಪಂಚಾಯತ್ ರಾಜ್ ವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದೆ ಎಂದು ಆಡಳಿತಾರೂಢ ಬಿಜೆಪಿ ವಿರುದ್ಧ ಕಾಪು ಕಾಂಗ್ರೆಸ್ ವತಿಯಿಂದ ಸೋಮವಾರ ಪ್ರತಿಭಟನೆ ಮಾಡಲಾಯಿತು. ವ್ಯವಸ್ಥೆ ಗೆ ತಿದ್ದುಪಡಿ ತರುವ ಮೂಲಕ ಪಂಚಾಯತ್ ಗಳ ಅಧಿಕಾರವನ್ನು ಮೊಟಕುಗೊಳಿಸಿ ಜನತೆಗೆ ಅನ್ಯಾಯವೆಸಗಿದ್ದಾರೆ. ಸೋಮವಾರ ಕಾಪು ತಾಲೂಕು ಕಚೇರಿ ಮುಂಭಾಗ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಈ ಸಂದರ್ಭ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ ಕರ್ನಾಟಕ ಸರ್ಕಾರವು ಪಂಚಾಯತ್ ರಾಜ್ ವ್ಯವಸ್ಥೆಯನ್ನು ತನ್ನ ಹದ್ದು ಬಸ್ತಿನಲ್ಲಿಡಲು ಪ್ರಯತ್ನಿಸುತ್ತಿದೆ. ಹದಿನೈದನೇ ಹಣಕಾಸು ಯೋಜನೆಯಡಿ ಯಾವುದೇ ಸವಲತ್ತುಗಳನ್ನು ಪಂಚಾಯತ್ ಗೆ ನೇರವಾಗಿ ಸರಬರಾಜು ಆಗುತ್ತಿತ್ತು. ಇದನ್ವಯ ಜಲಸಿರಿ ಕಾರ್ಯಕ್ರಮದ ಮುಖಾಂತರ ಕುಡಿಯುವ ನೀರಿನ ಸರಬರಾಜು ಮಾಡಲು ಅವಕಾಶ ನೀಡಿತು. ಆದರೆ ಈಗ ಬರೇ ಪೈಪ್ ಹಾಕುವ ಮುಖಾಂತರ ತನ್ನ ಸುಪರ್ದಿಯ ಕಂಪನಿಗೆ ಟೆಂಡರ್ ನೀಡಿ ಕೆಲಸ ಮಾಡುತ್ತಿದೆ. ಜಲಮೂಲವನ್ನು ಹುಡುಕಿ ಟ್ಯಾಂಕ್ ಗಳ ನಿರ್ಮಾಣದ ನಂತರ ಪೈಪ್ ಹಾಕುವುದು ವಾಡಿಕೆ. ಒಟ್ಟಾರೆಯಾಗಿ ಜನರ ದುಡ್ಡು ಪೋಲಾಗುವ ಕೆಲಸ ಕಾರ್ಯಗಳು ನಡೆಯುತ್ತಿವೆ. ಪಂಚಾಯತ್ ಗಳಲ್ಲಿ ಶಾಸಕ,ಸಂಸದರ ಮೂಲಕ ಅನುದಾನ ಬರದೆ ನೇರವಾಗಿ ಪಂಚಾಯತ್ ಗೆ ಬರುವ ಹಾಗೆ ಆಗಬೇಕು ಎಂದರು. ಬಳಿಕ ಕಾಪು ತಹಶಿಲ್ದಾರರ ಅನುಪಸ್ಥಿತಿಯಲ್ಲಿ ಉಪ ತಹಶಿಲ್ದಾರ ಹರಿಪ್ರಸಾದ್ ಭಟ್ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ,ಕಾಪು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ವೈ.ಸುಕುಮಾರ್, ಶೇಖರ್ ಹೆಜಮಾಡಿ,‌ನವೀನ್ ಶೆಟ್ಟಿ ,ಶೇಖಬ್ಬ ಉಚ್ಚಿಲ, ಮತ್ತು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
31 Oct 2022, 04:59 PM
Category: Kaup
Tags: