ಮಟ್ಟಾರುವಿನಲ್ಲಿ ಜರಗಲಿರುವ ಹಿಂದೂ ಸಮಾಜೋತ್ಸವದ ಪ್ರಚಾರ ಸ್ಟಿಕರ್ ಬಿಡುಗಡೆ
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ನವೆಂಬರ್ 27 ರಂದು ಮಟ್ಟಾರ್ ನಲ್ಲಿ ಜರಗಲಿರುವ ಹಿಂದೂ ಸಮಾಜೋತ್ಸವದ ಪ್ರಚಾರ ಸ್ಟಿಕರ್ ಬಿಡುಗಡೆ ಇಂದು ನಡೆಯಿತು.
ಶಿರ್ವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ನಡಿಬೆಟ್ಟು ನಿತ್ಯಾನಂದ ಹೆಗ್ಡೆಯವರು ಪ್ರಚಾರ ಸ್ಟಿಕರ್ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ವಿಶ್ವ ಹಿಂದೂ ಪರಿಷದ್ ಮಟ್ಟಾರು ಉಪಾಧ್ಯಕ್ಷ ಜಗದೀಶ ಆಚಾರ್ಯ ಸಭಾಧ್ಯಕ್ಷತೆ ವಹಿಸಿದ್ದರು.
ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಸಾದ್ ಕುತ್ಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಟ್ಟಿಂಗೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದೇವದಾಸ್ ಹೆಬ್ಬಾರ್ ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯ ಗುರುರಾಜ ಭಟ್, ಬಜರಂಗದಳ ಕಾಪು ಪ್ರಖಂಡ ಸುರಕ್ಷಾ ಪ್ರಮುಖ್ ಆನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
