ಉದ್ಯಾವರ : ಕನಸಿನ ಮನೆಗೆ ಇನ್ವರ್ಟರ್ ಕೊಡುಗೆ
Thumbnail
ಉದ್ಯಾವರ : ಇಲ್ಲಿಯ ಸ್ನೇಹ ಶಿಕ್ಷಣ ಮತ್ತು ಅಭಿವೃದ್ಧಿ ಸಂಸ್ಥೆಯ ಹಿರಿಯ ನಾಗರಿಕರ ಕನಸಿನ ಮನೆಗೆ ಉದ್ಯಾವರ ಹಲೀಮಾ ಸಾಬ್ಜು ಚಾರಿಟೇಬಲ್ ಟ್ರಸ್ಟಿನ ಟ್ರಸ್ಟಿ ಮತ್ತು ಉದ್ಯಮಿ ಹಾಜಿ ಅಬ್ದುಲ್ ಜಲೀಲ್ ಸಾಹೇಬ್ ವತಿಯಿಂದ ಸುಮಾರು 60 ಸಾವಿರ ರೂ. ಅಧಿಕ ಮೌಲ್ಯದ ಇನ್ವರ್ಟರ್ ಹಾಗೂ ದಿನಬಳಕೆ ಸಾಮಗ್ರಿ ಗಳನ್ನು ಹಸ್ತಾಂತರಿಸಲಾಯಿತು. ಉದ್ಘಾಟಿಸಿ ಮಾತನಾಡಿದ ಹಾಜಿ ಅಬ್ದುಲ್ ಜಲೀಲ್ ಸಾಹೇಬ್, ಹಿರಿಯ ನಾಗರಿಕರಿಗೆ ಈ ಕನಸಿನ ಮನೆಯಲ್ಲಿ ನೆಮ್ಮದಿ ಸಿಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಾವರ ಜಾಮಿಯಾ ಮಸೀದಿಯ ಧರ್ಮಗುರು ಅಬ್ದುಲ್ ರಶೀದ್ ರೆಹಮಾನಿ ಆಶೀರ್ವಚನದಲ್ಲಿ ಮಾತನಾಡಿ, ಬಾಲ್ಯ ಯೌವನ ದಾಟಿ ದೇಹದಲ್ಲಿ ಶಕ್ತಿ ಕುಂದಿದ ದೇವರ ಮಕ್ಕಳಿಗೆ ಆಸರೆಯಾಗಿರುವ ಹಿರಿಯ ನಾಗರಿಕರ ಕನಸಿನ ಮನೆಗೆ ಹಾಜಿ ಅಬ್ದುಲ್ ಜಲೀಲ್ ಅವರು ಕೊಡುಗೆ ಮಾನವೀಯತೆಗೆ ಆದರ್ಶಪ್ರಾಯ ಎಂದರು. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ದಾನಿ ಉದ್ಯಮಿ ಹಾಜಿ ಅಬ್ದುಲ್ ಜಲೀಲ್ ಸಾಹೇಬ್ ರವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ರಿಯಾಝ್ ಪಳ್ಳಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ಗಿರೀಶ್ ಕುಮಾರ್, ಪ್ರಮುಖರಾದ ರಾದ ಸಚಿನ್ ಸಾಲ್ಯಾನ್ ಬೊಳ್ಜೆ, ಸಲ್ವದೊರ್ ದಾಂತಿ, ಕನಸಿನ ಮನೆ ಸಹಾಯಕಿ ಕವಿತಾ ನಾಯ್ಕ್ ಉಪಸ್ಥಿತರಿದ್ದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕನಸಿನ ಮನೆ ಮುಖ್ಯಸ್ಥೆ ಸೀಮಾ ದೇವಾಡಿಗ ವಂದಿಸಿದರು. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು.
Additional image
07 Nov 2022, 09:15 PM
Category: Kaup
Tags: