ನವೆಂಬರ್ 20 : ಬಿರುವೆರ್ ಕಾಪು ಸೇವಾ ಸಮಿತಿ - ಜ್ಞಾನ ದೀವಿಗೆ ; 3ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಸಮಾರಂಭ
Thumbnail
ಕಾಪು : ಬಿರುವೆರ್ ಕಾಪು ಸೇವಾ ಸಮಿತಿಯ ವತಿಯಿಂದ 3ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಸಮಾರಂಭ ನವೆಂಬರ್ 20, ಆದಿತ್ಯವಾರ ಅಪರಾಹ್ನ 2 ಗಂಟೆಗೆ ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಕಾಪು ಇಲ್ಲಿ ಜರಗಲಿದೆ. ಕಾರ್ಯಕ್ರಮವನ್ನು ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷರಾದ ಪ್ರಭಾಕರ ಪೂಜಾರಿ ಉದ್ಘಾಟಿಸಲಿದ್ದು, ಬಿರುವೆರ್ ಕಾಪು ಸೇವಾ ಸಮಿತಿಯ ಉಪಾಧ್ಯಕ್ಷರಾದ ಸುಧಾಕರ್ ಸಾಲ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ‌ ಉಡುಪಿಯ ನ್ಯಾಯವಾದಿ ಗಿರೀಶ್ ಎಸ್. ಪಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ‌ ಓಮನ್ ಬಿಲ್ಲವಾಸ್ ನ ಉಪಾಧ್ಯಕ್ಷರಾದ ಸುಜಿತ್ ಅಂಚನ್ ಪಾಂಗಾಳ, ಮಸ್ಕತ್, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರಾದ ವಿಕ್ರಂ ಕಾಪು, ಬಿರುವೆರ್ ಕಾಪು ಸೇವಾ ಸಮಿತಿಯ ಕಾನೂನು ಸಲಹೆಗಾರರು, ವಕೀಲರಾದ ಸಂಕಪ್ಪ ಅಮೀನ್ ಉಪಸ್ಥಿತರಿರುವರು ಎಂದು‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
15 Nov 2022, 10:52 PM
Category: Kaup
Tags: