ಕಾಪು : ದೇವಿಪ್ರಸಾದ್ ಗ್ರಂಥಾಲಯದ ಪೂರ್ಣಿಮಾರಿಗೆ ಪ್ರಶಸ್ತಿ
Thumbnail
ಕಾಪು : ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು, ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ತುಮಕೂರು ಇವರಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಸಿಬ್ಬಂದಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ ತುಮಕೂರು ಜಿಲ್ಲೆಯ ತಿಪಟೂರಿನ ಕಲ್ಪತರು ಕಾಲೇಜು ಸಭಾಂಗಣದಲ್ಲಿ ಜರಗಿತು. ಕಾಪು ದೇವಿಪ್ರಸಾದ್ ಗ್ರಂಥಾಲಯದ ಪೂರ್ಣಿಮಾ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.
18 Nov 2022, 08:56 PM
Category: Kaup
Tags: