ಕಾಪು : ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವ ಸಂಪನ್ನ
ಕಾಪು : ತಾಲೂಕಿನ ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವವು ಆನೆಗುಂದಿ ಮಠದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ನವೆಂಬರ್ 18ರಂದು ಜರಗಿತು.
ಈ ಸಂದರ್ಭ ಕ್ಷೇತ್ರದ ದೇವರಿಗೆ ವಿಶೇಷ ಅಲಂಕಾರ ಪೂಜೆ ಮಾಡಲಾಗಿತ್ತು. ಶ್ರೀದೇವಿಯ ಮಹಾಪೂಜೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದು ಪ್ರಸಾದ ವಿತರಣೆ, ಅನ್ನ ಸಂತರ್ಪಣೆಯು ನಡೆಯಿತು.
ಮುಕ್ತೇಶ್ವರ ಪ್ರಕಾಶ ಎನ್ ಆಚಾರ್ಯ, ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಹರಿಚಂದ್ರ ಎಚ್ ಆಚಾರ್ಯ, ಕಾರ್ಯಾಧ್ಯಕ್ಷರಾದ ಕಾಪು ಜಯರಾಮ ಆಚಾರ್ಯ, ಮುಂಬೈ ಕಮಿಟಿ ಅಧ್ಯಕ್ಷರಾದ ಮಾಧವ ಎಸ್ ಆಚಾರ್ಯ, ಪದಾಧಿಕಾರಿಗಳು, ಸಮಾಜ ಬಾಂಧವರು ಉಪಸ್ಥಿತರಿದ್ದರು.
