ಕಾಪು ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ - 2022 ಆಮಂತ್ರಣ ಪತ್ರಿಕೆ ಬಿಡುಗಡೆ
Thumbnail
ಕಟಪಾಡಿ : ಇಲ್ಲಿನ ಎಸ್ ವಿ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 10ರಂದು ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ಆಶ್ರಯದಲ್ಲಿ ನಡೆಯಲಿರುವ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸ್ವಾತಂತ್ರ್ಯ ಹೋರಾಟಗಾರರು, ಗೋವಾ ವಿಮೋಚನ ಹೋರಾಟಗಾರರಾದ ಮಟ್ಟಾರು ವಿಟ್ಠಲ ಕಿಣಿಯವರು ಮಂಗಳೂರಿನ ತಮ್ಮ ಸ್ವಗೃಹದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು ಯುವಕರ ಮೇಲೆ ಆಶಾದಾಯಕವಾದ ಜವಾಬ್ದಾರಿ ಇದೆ. ಮುಖ್ಯವಾಗಿ ಯುವಕರಿಗೆ ವಿದ್ಯೆ, ವೈಯಕ್ತಿಕ ಚಾರಿತ್ರ್ಯ, ರಾಷ್ಟ್ರೀಯ ಚಾರಿತ್ರ್ಯವಿರಬೇಕು. ಎಲ್ಲರೂ ಸಂಘಟಿತರಾದಾಗ ಮಾತ್ರ ಕಾರ್ಯಸಾಧ್ಯ. ಕಾಪು ತಾಲೂಕು ಘಟಕದ ಕಾರ್ಯ, ಪರಿಶ್ರಮಕ್ಕೆ ಶುಭವಾಗಲಿ ಎಂದು ಹಾರೈಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಪುಂಡಲೀಕ ಮರಾಠೆ, ಕಾಪು ತಾಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಾಧ್ಯಕ್ಷರಾದ ಮುದ್ದು ಮೂಡುಬೆಳ್ಳೆ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿಗಳಾದ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ನೀಲಾನಂದ ನಾಯ್ಕ್, ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ| ದಯಾನಂದ ಪೈ, ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಕುಮಾರ್ ರಾವ್ ಮಟ್ಟು, ಕಾಪು ತಾಲೂಕಿನ ಸಂಘಟನ ಕಾರ್ಯದರ್ಶಿ ದೀಪಕ್ ಬೀರ, ಸುಧಾಕರ ಪಾಣಾರ ಮೂಡುಬೆಳ್ಳೆ ಉಪಸ್ಥಿತರಿದ್ದರು. ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಕುಮಾರ್ ರಾವ್ ಮಟ್ಟು ಸ್ವಾಗತಿಸಿ, ನಿರೂಪಿಸಿದರು. ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಪುಂಡಲೀಕ ಮರಾಠೆ ಪ್ರಸ್ತಾವನೆಗೈದರು. ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿಗಳಾದ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ವಂದಿಸಿದರು.
27 Nov 2022, 07:30 PM
Category: Kaup
Tags: