ಕಟಪಾಡಿ : ಏಣಗುಡ್ಡೆ ಶ್ರೀ ಶಿವಾನಂದ ಭಜನಾ ಮಂಡಳಿಯ 76ನೇ ವಾರ್ಷಿಕ ಮಂಗಳೋತ್ಸವ
ಕಟಪಾಡಿ : ಇಲ್ಲಿನ ಏಣಗುಡ್ಡೆ ಶ್ರೀ ಶಿವಾನಂದ ಭಜನಾ ಮಂಡಳಿಯ 76ನೇ ವಾರ್ಷಿಕ ಮಂಗಳೋತ್ಸವ ಡಿಸೆಂಬರ್ 3ರಂದು ಜರಗಲಿದೆ.
ಆ ಪ್ರಯುಕ್ತ ಅದೇ ದಿನ ಬೆಳಿಗ್ಗೆ ಏಳು ಗಂಟೆಗೆ ಗಣಹೋಮ, ಗಂಟೆ 10ಕ್ಕೆ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಗಂಟೆ 12ಕ್ಕೆ ಅನ್ನಸಂತರ್ಪಣೆ, ಸಂಜೆ ಗಂಟೆ 6ಕ್ಕೆ ಕಲಶ ಪ್ರತಿಷ್ಠೆಯೊಂದಿಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ಗಂಟೆ 12ಕ್ಕೆ ಮಂಗಳೋತ್ಸವ ನೆರವೇರಲಿದೆ ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ.
