ಕಾಪು : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ
ಕಾಪು : ರಕ್ತದಾನ ಶ್ರೇಷ್ಠವಾಗಿದೆ. ನಮ್ಮ ದೇಹದ ಬಗೆಗೂ ನಾವು ಗಮನಹರಿಸಿ ಆ ಮೂಲಕ ರಕ್ತದಾನ ಶಿಬಿರಗಳಲ್ಲಿ ಪಾಲ್ಗೊಳ್ಳಬೇಕಾಗಿದೆ ಎಂದು ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ ಮುಖ್ಯಸ್ಥರಾದ ಡಾ. ವೀಣಾ ಕುಮಾರಿ ಹೇಳಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು,ಕಾಲೇಜಿನ ಐಕ್ಯೂಎಸಿ ಘಟಕ, ಶ್ರೀದೇವಿ ಸ್ಪೋರ್ಟ್ಸ್ ಮತ್ತು ಸಾಂಸ್ಕೃತಿಕ ಸಂಘ ಕಾಪು, ಯುವ ರೆಡ್ ಕ್ರಾಸ್ ಘಟಕ, ಕಾಲೇಜು ಹಳೆ ವಿದ್ಯಾರ್ಥಿ ಸಂಘ, ಹೆಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು ಹಾಗೂ ಜಿಲ್ಲಾ ರಕ್ತ ನಿಧಿ ಕೇಂದ್ರ ಉಡುಪಿ, ಇವರ ಸಹಯೋಗದೊಂದಿಗೆ ಡಿಸೆಂಬರ್ 1ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಜರಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಸ್ಟೀವನ್ ಕ್ವಾಡ್ರಸ್ ವಹಿಸಿದ್ದರು.
ಈ ಸಂದರ್ಭ ಐಕ್ಯೂಎಸಿ ಸಂಚಾಲಕರಾದ ಡಾ.ರೋಶ್ನಿ ಯಶವಂತ್, ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷರಾದ ಅನಿಲ್ ಕುಮಾರ್, ಹೆಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು ಇದರ ಮ್ಯಾನೇಜರ್ ರಾಘವೇಂದ್ರ ರಾವ್, ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ.ಸುಚಿತ್ರಾ ಎಸ್ ಆರ್,
ಬೋಧಕ-ಬೋಧಕೇತರ ವರ್ಗ, ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಅಭಿವೃದ್ಧಿ ಸಮಿತಿಯವರು ಉಪಸ್ಥಿತರಿದ್ದರು.
